ಮಂಗಳೂರು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಂಗಳೂರು ಇದರ 13ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯ ಅಂಗವಾಗಿ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ನಗರದ ಪಡೀಲ್‌ನ ಆತ್ಮಶಕ್ತಿ ಸೌಧದಲ್ಲಿ ನಡೆಯಿತು.
ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಮಾತನಾಡಿ ‘ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತೀ ವರ್ಷ ವಾರ್ಷಿಕ ಸಾಮಾನ್ಯ ಸಭೆಯ ಸಂದರ್ಭ ಸಂಘದ ಸದಸ್ಯರಿಗೆ ಆರೋಗ್ಯ ಶಿಬಿರ ಏರ್ಪಡಿಸುತ್ತಾ ಬಂದಿದೆ.
ಇದು 73ನೇ ಉಚಿತ ವೈದ್ಯಕೀಯ ಶಿಬಿರವಾಗಿದ್ದು, ಸದಸ್ಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ ಎಂದರು.
ಸಂಘದ ಸದಸ್ಯ ಹರೀಶ್ ಪಿ.ಡಿ.ಇವರು ಶಿಬಿರ ಉದ್ಘಾಟಿಸಿದರು. ಶ್ರೀನಿವಾಸ್ ಇನ್ಸ್‌ಸ್ಟಿಟ್ಯೂಟ್ ಆಪ್ ಡೆಂಟಲ್ ಸೈನ್ಸ್‌ನ ಡಾ. ಶಿಫಾಲಿ ಸಾಲಿಯಾನ್ ಶಿಬಿರದಲ್ಲಿ ಲಭ್ಯ ಇರುವ ಸೇವೆಗಳ ಬಗ್ಗೆ ಮಾಹಿತಿ ನೀಡಿದರು. ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ., ಜಿ. ಪರಮೇಶ್ವರ ಪೂಜಾರಿ, ಆನಂದ್ ಎಸ್ ಕೊಂಡಾಣ, ಸೀತಾರಾಮ್ ಎನ್, ರಮಾನಾಥ್ ಸನಿಲ್, ಚಂದ್ರಹಾಸ ಮರೋಳಿ, ಮುದ್ದು ಮೂಡುಬೆಳ್ಳೆ,
ಬಿ.ಪಿ. ದಿವಾಕರ್, ಗೋಪಾಲ್ ಎಂ, ಚಂದ್ರಾವತಿ, ಉಮಾವತಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಸಲಹೆಗಾರ ಅಶೋಕ್ ಕುಮಾರ್, ಸಂಘದ ಸದಸ್ಯರಾದ ಸದಾನಂದ ಪೂಜಾರಿ, ಜಗದೀಶ್ ಕೋಟ್ಯಾನ್ ಉಪಸ್ಥಿತರಿದ್ದರು. ಸಹಾಯಜ ಪ್ರಬಂಧಕ ವಿಶ್ವನಾಥ ಕಾರ್ಯಕ್ರಮ ನಿರೂಪಿಸಿದರು.