blank

CSK, ಸನ್​ರೈಸರ್ಸ್​ ಅಲ್ಲ… ಈ 4 ತಂಡಗಳು ಪ್ಲೇಆಫ್​​ಗೆ​ ಎಂಟ್ರಿಕೊಡಲಿವೆ: ಮಿ.360 ಭವಿಷ್ಯ | IPL 2025

blank

IPL 2025: ಐಪಿಎಲ್​ನ 18ನೇ ಆವೃತ್ತಿಗೆ ಕ್ಷಣಗಣನೆ ಆರಂಭಗೊಂಡಿದೆ. ಮೊದಲ ಹಾಗೂ ಶುಭಾರಂಭ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಮತ್ತು ಕೋಲ್ಕತ ನೈಟ್​ ರೈಡರ್ಸ್​ ತಂಡಗಳು ಭಾರೀ ಪೈಪೋಟಿ ಕೊಡಲು ಸಜ್ಜಾಗಿವೆ. ಈ ಮಧ್ಯೆ ಯಾರಿಗೆ ಮೊದಲ ಪಂದ್ಯದಲ್ಲೇ ಗೆಲುವಿನ ಖಾತೆ ತೆರೆಯಲಿದೆ ಎಂಬ ಕುತೂಹಲ ಸದ್ಯ ಅಭಿಮಾನಿಗಳಲ್ಲಿ ಕಾಡಿದೆ.

ಇದನ್ನೂ ಓದಿ: ಬಂಗಾರ-ಸಿಂಗಾರ; ಚಿನ್ನ ಖರೀದಿಗೆ ಯೋಚಿಸುತ್ತಿದ್ದೀರಾ? ಹಾಗಿದ್ರೆ ಈ ವಿಷಯಗಳ ಬಗ್ಗೆ ನಿಮಗೆ ಗೊತ್ತಿರಲಿ | Gold Rates

ಐಪಿಎಲ್​ ಇನ್ನೂ ಹತ್ತಿರವಾಗುತ್ತಿದ್ದಂತೆ, ಮಾಜಿ ಕ್ರಿಕೆಟಿಗರು ಯಾವ ತಂಡಗಳು ಪ್ಲೇಆಫ್‌ಗೆ ಲಗ್ಗೆಯಿಡಲಿವೆ ಮತ್ತು ಯಾವ ತಂಡ ಐಪಿಎಲ್​ 2025ರ ಟ್ರೋಫಿಯನ್ನು ತನ್ನ ಮುಡಿಗೇರಿಸಿಕೊಳ್ಳಲಿದೆ ಎಂಬ ಭವಿಷ್ಯವಾಣಿಗಳನ್ನು ನುಡಿಯಲು ಶುರು ಮಾಡಿದ್ದಾರೆ. ಈ ಪಟ್ಟಿಗೆ ಇತ್ತೀಚಿನ ಸೇರ್ಪಡೆ ದಕ್ಷಿಣ ಆಫ್ರಿಕಾದ ದಿಗ್ಗಜ ಕ್ರಿಕೆಟಿಗ, ಮಿಸ್ಟರ್​ 360 ಆಟಗಾರ ಎಬಿ ಡಿವಿಲಿಯರ್ಸ್. ಡಿವಿಲಿಯರ್ಸ್ ಈ ವರ್ಷ ಪ್ಲೇಆಫ್‌ಗೆ ತಲುಪುವ ನಾಲ್ಕು ಬಲಿಷ್ಠ ತಂಡಗಳು ಇವೇ ಎಂದು ಭವಿಷ್ಯ ನುಡಿದಿದ್ದಾರೆ. ಅಸಲಿಗೆ ಈ ಪಟ್ಟಿಯಲ್ಲಿ ಐದು ಬಾರಿ ಚಾಂಪಿಯನ್ಸ್ ಆಗಿ ಮಿಂಚಿರುವ ಚೆನ್ನೈ ಸೂಪರ್ ಕಿಂಗ್ಸ್ ಹೆಸರು ಇಲ್ಲವೇ ಇಲ್ಲ.

ಈ ಹಿಂದೆ ಒಂದಷ್ಟು ವರ್ಷಗಳ ಕಾಲ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಿದ ಎಬಿ ಡಿವಿಲಿಯರ್ಸ್​, ವಿರಾಟ್​ ಕೊಹ್ಲಿ ನಾಯಕತ್ವದಲ್ಲಿ ಆರ್​ಸಿಬಿ ಪರ ಅದ್ಭುತ ಬ್ಯಾಟಿಂಗ್ ಕೊಡುಗೆ ನೀಡಿದ್ದಾರೆ. ತಂಡಕ್ಕೆ ಕೇವಲ ರನ್​ಗಳನ್ನು ಮಾತ್ರ ಬಾರಿಸದೆ, ಮೈದಾನದಲ್ಲಿ ಸೇರಿದ್ದ ಸಹಸ್ರಾರು ಸಂಖ್ಯೆಯ ಅಭಿಮಾನಿಗಳನ್ನು ತಮ್ಮ ಆಟದ ವೈಖರಿಯಿಂದ ರಂಜಿಸುವಲ್ಲಿಯೂ ಎಬಿಡಿ ಯಶಸ್ವಿಯಾಗಿದ್ದಾರೆ. ಈಗ ಐಪಿಎಲ್​ 18ನೇ ಆವೃತ್ತಿ ಸಮೀಪಿಸುತ್ತಿದ್ದಂತೆ ತಮ್ಮ ಅನಿಸಿಕೆಯನ್ನು ಫ್ಯಾನ್ಸ್​ಗಳ ಮುಂದೆ ಬಹಿರಂಗಪಡಿಸಿದ್ದಾರೆ.

ಇದನ್ನೂ ಓದಿ: ಕಲ್ಲಂಗಡಿಯನ್ನು ಕತ್ತರಿಸಿ ಫ್ರಿಡ್ಜ್‌ನಲ್ಲಿ ಇಡ್ತೀರಾ? ಯಾವುದೇ ಕಾರಣಕ್ಕೂ ಇಷ್ಟು ಹೊತ್ತು ಇಡಲೇಬೇಡಿ, ಅಪಾಯ ಫಿಕ್ಸ್​! Watermelon

“ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್ (ಎಂಐ), ಗುಜರಾತ್ ಟೈಟಾನ್ಸ್ (ಜಿಟಿ) ಮತ್ತು ಹಾಲಿ ಚಾಂಪಿಯನ್ ಕೋಲ್ಕತ ನೈಟ್ ರೈಡರ್ಸ್ (ಕೆಕೆಆರ್) ಈ ಬಾರಿಯ ಐಪಿಎಲ್​ ಪ್ಲೇಆಫ್ ತಲುಪಲಿರುವ ನಾಲ್ಕು ತಂಡಗಳು ಎಂದು ಭವಿಷ್ಯ ನುಡಿದಿದ್ದಾರೆ. ಡಿವಿಲಿಯರ್ಸ್​ ಮಾತು ಕೇಳಿದ ಆರ್​ಸಿಬಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದು, ನೀವೇಳಿದ ಮಾತು ಈಡೇರಲಿ ಎಂದು ಆಶಿಸಿದ್ದಾರೆ,(ಏಜೆನ್ಸೀಸ್).

ಜನನವೂ ಇಲ್ಲೇ, ಮರಣವೂ ಇಲ್ಲೇ! ಪ್ರೀತಿ, ಪ್ರೇಮಕ್ಕೆ ಸಾಕ್ಷಿಯಾಗಿದ್ದ ಕಟ್ಟಡ ಈಗ ಸಾವಿನ ಮನೆ | Love Motel

Share This Article

ಕನಸಿನಲ್ಲಿ ಈ ಮೂರು ಪಕ್ಷಿಗಳು ಕಂಡ್ರೆ ಲಾಟರಿ ಹೊಡೆದಂತೆ! Lucky Birds ನೀಡುವ ಸುಳಿವೇನು..?

Lucky Birds : ಸಾಮಾನ್ಯವಾಗಿ ನಿದ್ದೆಯಲ್ಲಿ ಕನಸು ಕಾಣೋದು ಸಹಜ. ಈ ಕನಸುಗಳ ಮೂಲಕ ಪ್ರಕೃತಿ…

ಯಾವ ಕಾರಣಕ್ಕೂ ಮಾವಿನ ವಾಟೆ ಎಸೆಯಬೇಡಿ…ಅದರ ಪ್ರಯೋಜನಗಳ ಬಗ್ಗೆ ತಿಳಿದ್ರೆ ನೀವು ಖಂಡಿತ ಅಚ್ಚರಿಪಡ್ತೀರಾ! Mango Kernels

Mango Kernels : ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ರುಚಿಗೆ ಮಾತ್ರವಲ್ಲ, ಮಾವಿನ…

ಪ್ಲಾಸ್ಟಿಕ್ ಬಾಕ್ಸ್​​ನಲ್ಲಿ ಬಿಸಿ ಅನ್ನ ಇಡುವ ಅಭ್ಯಾಸವಿದೆಯೇ? ಆರೋಗ್ಯದ ಬಗ್ಗೆ ಇರಲಿ ಎಚ್ಚರ.. hot rice in plastic boxes

hot rice in plastic boxes: ಪ್ಲಾಸ್ಟಿಕ್ ಬಳಕೆಯನ್ನು ತಡೆಯಲಾಗುತ್ತಿಲ್ಲ. ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸುವುದು ಹಾನಿಕಾರಕ,…