ಸ್ತ್ರೀ ಸಬಲೀಕರಣದಲ್ಲಿ ಅಬ್ಬಕ್ಕ ಮುಂಚೂಣಿ

blm (1)
Published on

ಶಿರ್ವ: ಪೋರ್ಚುಗೀಸರ ದಾಳಿಯಿಂದ ರಕ್ಷಿಸುವುದಕ್ಕಾಗಿ ಹೋರಾಡಿದ ಧೀರ ಮಹಿಳೆ ಉಳ್ಳಾಲದ ರಾಣಿ ಅಬ್ಬಕ. ಅವರನ್ನು ಸ್ಮರಿಸಬೇಕಿರುವುದು ನಮ್ಮ ಕರ್ತವ್ಯ. ಸ್ತ್ರೀ ಸಬಲೀಕರಣ, ದೇಶಾಭಿಮಾನದಲ್ಲಿ ರಾಣಿ ಅಬ್ಬಕ್ಕನ ಹೆಸರು ಮುಂಚೂಣಿಯಲ್ಲಿರುತ್ತದೆ ಎಂದು ಉಡುಪಿ ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ.ಪ್ರಜ್ಞಾ ಮಾರ್ಪಳ್ಳಿ ಅಭಿಪ್ರಾಯಪಟ್ಟರು.

ಶಿರ್ವದ ಮುಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ಮಂಗಳೂರು ವಿಭಾಗ ಮತ್ತು ಮುಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜಿನ ಸಾಹಿತ್ಯ ಸಂಘ, ಮಾನವಿಕ ಸಂಘಗಳ ಸಹಯೋಗದಲ್ಲಿ ಆಯೋಜನೆಗೊಂಡ ಅಬ್ಬಕ್ಕ-500 ಪ್ರೇರಣಾದಾಯಿ ಉಪನ್ಯಾಸ ಸರಣಿ-27 ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ಉದ್ಘಾಟಿಸಿದರು. ಪ್ರಾಚಾರ್ಯ ಡಾ.ಮಿಥುನ್ ಚಕ್ರವರ್ತಿ ಅಧ್ಯಕ್ಷತೆ ವಹಿಸಿದ್ದರು. ಪ್ರಾಧ್ಯಾಪಕ ಡಾ.ಸುರೇಂದ್ರ ಶೆಟ್ಟಿ ಪ್ರಸ್ತಾವನೆಗೈದರು. ವರಮಹಾಲಕ್ಷ್ಮೀ ವಂದಿಸಿದರು. ಡಾ.ಭೈರವಿ ಪಾಂಡ್ಯ ನಿರೂಪಿಸಿದರು. ಪ್ರಶಾಂತಿ ಸಹಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net