More

    ಪೂರ್ವ ಕ್ಷೇತ್ರದ ಅಭಿವೃದ್ಧಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ

    ಹುಬ್ಬಳ್ಳಿ : ಪೂರ್ವ ವಿಧಾನಸಭಾ ಕ್ಷೇತ್ರದ 23ವಾರ್ಡ್​ಗಳಲ್ಲಿ ತಲೆದೋರಿರುವ ಮೂಲ ಸೌಕರ್ಯಗಳ ಅಭಿವೃದ್ಧಿಗೆ ತುರ್ತಾಗಿ 25ಕೋಟಿ ರೂ. ವೆಚ್ಚದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕೂಡಲೇ ಸಲ್ಲಿಸುವಂತೆ ಶಾಸಕ ಪ್ರಸಾದ ಅಬ್ಬಯ್ಯ ಅಧಿಕಾರಿಗಳಿಗೆ ಸೂಚಿಸಿದರು.

    ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿ ಕುರಿತು ತಮ್ಮ ಗೃಹ ಕಚೇರಿಯಲ್ಲಿ ಭಾನುವಾರ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು, ಅಗತ್ಯ ಸೂಚನೆ ನೀಡಿದರು.

    ಇಲ್ಲಿನ ನ್ಯೂ ಇಂಗ್ಲಿಷ್ ಸ್ಕೂಲ್ ಮೇದಾರ ಓಣಿ ಬಳಿ ಇರುವ ಮಟನ್ ಮಾರುಕಟ್ಟೆಯನ್ನು ನೆಲಸಮ ಗೊಳಿಸಿ 5 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಮಟನ್ ಮಾರುಕಟ್ಟೆ ನಿಮಾಣ ಮಾಡುವುದು, 5 ಕೋಟಿ ರೂ. ವೆಚ್ಚದಲ್ಲಿ ಸಿಸಿಟಿವಿ ಕಣ್ಗಾವಲು, ಮಂಟೂರು ರಸ್ತೆ ಹರಿಶ್ಚಂದ್ರ ಸ್ಮಶಾನ ಬಳಿ 2ಕೋಟಿ ವೆಚ್ಚದಲ್ಲಿ ಆಸ್ಪತ್ರೆ ನಿಮಾಣ ಸೇರಿದಂತೆ ಶಾಲೆಗಳ ಅಭಿವೃದ್ಧಿಗೆ, ಅಂಗನವಾಡಿ ನಿಮಾಣ, ಕುಡಿಯುವ ನೀರು ಸರಬರಾಜು, ಒಳಚರಂಡಿ ಹೀಗೆ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ತುರ್ತಾಗಿ 25ಕೋಟಿ ರೂ. ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದರೆ ಅನುದಾನ ಬಿಡಗಡೆ ಮಾಡಿಸಲಾಗುವುದು ಎಂದು ಹೇಳಿದರು.

    ಪ್ರತಿಬಾರಿಯೂ ಸಭೆಯಲ್ಲಿ ಹೇಳಿದ ವಿಷಯಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಕಳೆದ ಬಾರಿ ಸಭೆಯಲ್ಲಿ ಹೇಳಿದ ವಿಷಯಗಳು ಮತ್ತು ಚರ್ಚೆಗಳನ್ನು ಮರೆತಂತೆ ಕಾಣಿಸುತ್ತಿದೆ. ಪ್ರತಿ ಬಾರಿ ಹೇಳಿದ ವಿಷಯ ಪುನರಾವರ್ತನೆಯಾಗುತ್ತಿದೆ. ಈ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕು. ಸಭೆಯಲ್ಲಿ ನೀಡಿದ ಸೂಚನೆಗಳನ್ನು ಚಾಚು ತಪ್ಪದೆ ಪಾಲಿಸಿ, ವರದಿ ಒಪ್ಪಿಸಬೇಕು ಎಂದು ಸೂಚಿಸಿದರು.

    ಮಹಾನಗರ ಪಾಲಿಕೆ ಕಾನೂನು ಸಲಹೆ ವಿಭಾಗ ಬಲಹೀನವಾದಂತಿದೆ. ಈ ಹಿಂದೆ ಹತ್ತಾರು ಬಾರಿ ಸೂಚನೆ ನೀಡಿದರೂ ಯಾವುದೆ ಕ್ರಮವಾಗುತ್ತಿಲ್ಲ. ಪಾಲಿಕೆ ಆಸ್ತಿಗಳನ್ನು ಬೇಕಾಬಿಟ್ಟಿಯಾಗಿ ಬಳಸಿಕೊಳ್ಳುತ್ತಿದ್ದಾರೆ. ಪಾಲಿಕೆ ಆಸ್ತಿಗಳನ್ನು ನಿಯಮಾನುಸಾರ ಬಳಕೆ ಮಾಡದೇ ದುರುಪಯೋಗ ಮಾಡಿಕೊಳ್ಳುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಮುಂದಾಗಬೇಕು. ಪಾಲಿಕೆ ಆಸ್ತಿಗಳನ್ನು ಉಳಿಸುವ ಕಾರ್ಯವಾಗಲಿ ಎಂದು ಶಾಸಕರು ಅಧಿಕಾರಿಳಿಗೆ ಎಚ್ಚರಿಕೆ ನೀಡಿದರು.

    ಪಾಲಿಕೆ ಅಧೀಕ್ಷಕ ಅಭಿಯಂತರ ಬಿ. ತಿಮ್ಮಪ್ಪ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವಿಜಯಕುಮಾರ, ಸಹಾಯಕ ವಲಯ ಆಯುಕ್ತ ಬಸವರಾಜ ಲಮಾಣಿ, ಫಕೀರಪ್ಪ ಇಂಗಳಗಿ ಹಾಗೂ ಇತರ ಅಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts