More

    ಸಂಕ್ರಾಂತಿ ರೈತ ಜನಾಂಗಕ್ಕೆ ಹಿಗ್ಗು ತರಲಿ

    ಯಾದಗಿರಿ: ಭಾರತ ಸರ್ವಧರ್ಮಗಳ ಶಾಂತಿಯ ನಾಡು. ಒಕ್ಕಲಿಗ ಚೆನ್ನಾಗಿದ್ದರೆ ನಾಡೆಲ್ಲ ಚೆನ್ನಾಗಿರುತ್ತದೆ. ಆತನ ಬದುಕಿನ ಬೆಳಕಾಗಿ ಈ ಹಬ್ಬ ಸಂಭ್ರಮ ತರುವಂತಾಗಲಿ. ಈ ಹಬ್ಬ ರೈತ ಜನಾಂಗಕ್ಕೆ ಹಿಗ್ಗನ್ನು ತರಲಿ ಎಂದು ಅಬ್ಬೆತುಮಕೂರಿನ ಪೀಠಾಧಿಪತಿ ಡಾ.ಗಂಗಾಧರ ಮಹಾಸ್ವಾಮಿಗಳು ನುಡಿದರು.

    ಮಕರ ಸಂಕ್ರಾಂತಿ ನಿಮಿತ್ತ ಶ್ರೀಮಠದಿಂದ ಅಬ್ಬೆತುಮಕೂರಿನ ಸೀಮಾಂತರದ ಭೀಮಾ ನದಿ ತಟದಲ್ಲಿ ಬುಧವಾರ ಹಮ್ಮಿಕೊಂಡ ಹೊಳಿ ಜಾತ್ರೆಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ರೈತ ಉತ್ತಿ ಬಿತ್ತಿ ಬೆಳೆದ ಸಲನ್ನು ರಾಶಿ ಮಾಡಿಕೊಳ್ಳುವ ಸಂದರ್ಭದಲ್ಲಿ ಬರುವ ಸಂಕ್ರಾಂತಿ ವಿಶೇಷ ಮಹತ್ವವನ್ನು ಪಡೆದುಕೊಂಡಿದೆ ಎಂದರು.

    ಇದಕ್ಕೂ ಮುನ್ನ ಶ್ರೀಗಳು ಹೂವಿನಿಂದ ಅಲಂಕೃತವಾದ ತೆಪ್ಪದಲ್ಲಿ ಭೀಮಾನದಿಯ ಮಧ್ಯಭಾಗಕ್ಕೆ ತೆರಳಿ ಪುಣ್ಯ ಸ್ನಾನ ಮಾಡಿ ನಾಡಿಗೆ ಒಳಿತಾಗಲಿ ಎಂದು ಪ್ರಾಥರ್ಿಸಿ ಗಂಗಾದೇವಿಗೆ ವಿಶೇಷ ಪೂಜೆ ನೆರವೇರಿಸಿದರು. ಪುನಃ ಶ್ರೀಗಳು ತೆಪ್ಪದಲ್ಲಿ ನದಿಯ ಮಧ್ಯಭಾಗದಿಂದ ದಡಕ್ಕೆ ಆಗಮಿಸಿದರು. ಶ್ರೀಗಳಿಗೆ ಭಕ್ತರು ಪಾದಪೂಜೆ ನೆರವೇರಿಸಿದರು. ನಂತರ ಶ್ರೀಗಳು ಗಂಗಾಮಾತೆಗೆ ಸೀರೆ ಉಡಿಸುವುದರ ಮೂಲಕ ಉಡಿ ತುಂಬುವ ಕಾರ್ಯಕ್ರಮ ನಡೆಸಿಕೊಟ್ಟರು.
    ದೋರನಹಳ್ಳಿ ಶ್ರೀ ವೀರಮಹಾಂತ ಶಿವಾಚಾರ್ಯರು, ದೇವಾಪುರದ ಶ್ರೀಗಳು, ಡಾ. ಸುಭಾಶ್ಚಂದ್ರ ಕೌಲಗಿ, ಎಸ್.ಎನ್. ಮಿಂಚನಾಳ, ರಾಮಶೆಟ್ಟೆಪ್ಪ ಹುಗ್ಗಿ, ಹನುಮಾನ ಸೇಠ ಸುರಪುರ, ಡಾ.ಶರಣಬಸವ ಎಲ್ಹೇರಿ ಸೇರಿ ಅಬ್ಬೆತುಮಕೂರು ಮತ್ತು ಸುತ್ತಮುತ್ತಲಿನ ಹಳ್ಳಿಗಳು ಅಲ್ಲದೆ ಶಹಾಪುರ, ಸುರಪುರ, ಗುರುಮಠಕಲ್, ಕಲಬುರಗಿ, ಸೇಡಂ, ಚಿತ್ತಾಪೂರ, ಬಿಜಾಪುರ, ಸಿಂದಗಿ, ದಾವಣಗೇರ, ಸಿಂದನೂರ, ಮಾನವಿ, ರಾಯಚೂರು ಸೇರಿದಂತೆ ಆಂದ್ರ ಮಹಾರಾಷ್ಟ್ರದಿಂದಲೂ ಅನೇಕ ಭಕ್ತರು ಆಗಮಿಸಿದ್ದರು.

    ಇದಾದ ನಂತರ ಹೊಳಿ ಜಾತ್ರೆಗೆ ಆಗಮಿಸಿದ ಎಲ್ಲ ಭಕ್ತರು ಬಿಳಿ ಜೋಳದ ರೊಟ್ಟಿ, ಸಜ್ಜಿ ರೊಟ್ಟಿ, ಸೆಂಗಾ ಹೋಳಿಗೆ, ಕರಿಗಡಬು, ಪುಂಡಿಪಲ್ಯ, ಹಿಂಡಿಪಲ್ಯ, ಎಣ್ಣೆ ಬದನೆಕಾಯಿ, ಶೆಂಗಾ ಹಿಂಡಿ, ಬಜ್ಜಿ, ಭತರ್ಾ, ಚಿತ್ರಾನ್ನ. ಹೀಗೆ ವಿವಿಧ ಬಗೆಯ ಸಂಕ್ರಾಂತಿಯ ಭಕ್ಷಭೋಜನವನ್ನು ಸವಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts