PHOTOS | ಕರ್ನಾಟಕ ಉಚ್ಚ ನ್ಯಾಯಾಲಯ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿದ ಅಭಯ್​ ಶ್ರೀನಿವಾಸ್​​ ಓಕಾ

ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಅಭಯ್​ ಶ್ರೀನಿವಾಸ್​​ ಓಕಾ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ನಗರದ ರಾಜಭವನದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಸಮ್ಮುಖದಲ್ಲಿ ಅಭಯ್​​ ಶ್ರೀನಿವಾಸ್​​ ಓಕಾ ಪ್ರಮಾಣ ವಚನ ಸ್ವೀಕರಿಸಿದರು.
ಅಭಯ್​​ ಶ್ರೀನಿವಾಸ್​​ ಓಕಾ ಅವರು ಇದಕ್ಕೂ ಮೊದಲು ಮುಂಬೈ ಉಚ್ಚ ನ್ಯಾಯಾಲಯ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು.

ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಬೆಂಗಳೂರು ಮಹಾಪೌರರಾದ ಗಂಗಾಂಬಿಕೆ ಮಲ್ಲಿಕಾರ್ಜುನ, ಕರ್ನಾಟಕ ಉಚ್ಚ ನ್ಯಾಯಾಲಯದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ, ಬಿಹಾರ ಮತ್ತು ಜಾರ್ಖಂಡ್‍ನ ರಾಜ್ಯಪಾಲ ನ್ಯಾಯಮೂರ್ತಿ ಎಂ. ರಾಮಾ ಜೋಯಿಸ್, ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಧೀರೇಂದ್ರ ಹೀರಾಲಾಲ್ ವಘೇಲಾ ಮತ್ತಿತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. (ದಿಗ್ವಿಜಯ ನ್ಯೂಸ್​)