ರಾಯಚೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನ ವಿರೋಧಿ ನೀತಿಗಳನ್ನು ಹಿಂಪಡೆಯಬೇಕು. ಹಿಂದಿನ ರಾಜ್ಯ ಸರ್ಕಾರ ಜಾರಿಗೊಳಿಸಿರುವ ರೈತ ಮತ್ತು ಕಾರ್ಮಿಕ ವಿರೋಧಿ ನೀತಿಗಳನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಸ್ಥಳೀಯ ಅಂಬೇಡ್ಕರ್ ವೃತ್ತದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ರೈತರ ಉತ್ಪನ್ನಗಳಿಗೆ ಸ್ವಾಮಿನಾಥನ್ ಶಿಾರಸ್ಸಿನಂತೆ ಕನಿಷ್ಠ ಬೆಂಬಲ ಬೆಲೆ ಹಾಗೂ ಖರೀದಿ ಖಾತ್ರಿ ಒದಗಿಸುವ ಕಾಯ್ದೆ ಜಾರಿಗೊಳಿಸಬೇಕು. ಬಿತ್ತನೆ ಬೀಜ, ರಸಗೊಬ್ಬರ ಹಾಗೂ ವಿದ್ಯುತ್ ಮೇಲಿನ ಸಬ್ಸಿಡಿ ಮೊತ್ತವನ್ನು ಹೆಚ್ಚಳ ಮಾಡಬೇಕು. ರೈತರ ಆತ್ಮಹತ್ಯೆ ತಡೆಯಲು ಅಗತ್ಯ ಕ್ರಮಕೈಗೊಳ್ಳಬೇಕು.
2020ರಲ್ಲಿ ಜಾರಿಗೊಳಿಸಿದ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಜಾನುವಾರು ಸಂರಕ್ಷಣಾ ಕಾಯ್ದೆಗಳನ್ನು ರದ್ದುಪಡಿಸಬೇಕು. ಕಾರ್ಮಿಕರ ಕೆಲಸದ ಅವ ಹೆಚ್ಚಳವನ್ನು ಹಿಂಪಡೆಯಬೇಕು. ಸಮಾಜ ಕೆಲಸಕ್ಕೆ ಸಮಾನ ವೇತನ ಜಾರಿ ಜಾರಿಗೊಳಿಸಬೇಕು.
ಪ್ರತಿಯೊಬ್ಬರಿಗೂ ವಸತಿ ಹಕ್ಕು ಖಾತ್ರಿಪಡಿಸಬೇಕು. ಬಗರ್‌ಹುಕುಂ ರೈತರಿಗೆ ಹಕ್ಕುಪತ್ರ ನೀಡಬೇಕು. ಬಲವಂತದ ಭೂಸ್ವಾೀನ ನಿಲ್ಲಿಸಬೇಕು. ದೆಹಲಿ ರೈತರ ಹೋರಾಟ ಸಂದರ್ಭದಲ್ಲಿ ರೈತರ ಮೇಲೆ ಹಾಕಿರುವ ಕೇಸ್‌ಗಳನ್ನು ವಾಪಸ್ ಪಡೆಯಬೇಕು ಸೇರಿದಂತೆ ಇನ್ನಿತರ ಬೇಡಿಕೆ ಈಡೇರಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಮಿತಿ ಪದಾಕಾರಿಗಳಾದ ಕೆ.ಜಿ.ವೀರೇಶ, ಡಿ.ಎಸ್.ಶರಣಬಸವ, ಮಹೇಶ ಚೀಕಲಪರ್ವಿ, ಮಾರೆಪ್ಪ ಹರವಿ, ಆಂಜಿನೇಯ ಕುರುಬದೊಡ್ಡಿ, ಬೂದೆಪ್ಪ ಗಬ್ಬೂರು, ಎಚ್.ಪದ್ಮಾ, ಕರಿಯಪ್ಪ ಅಚ್ಚೊಳ್ಳಿ, ಮಲ್ಲನಗೌಡ, ಶರಣಮ್ಮ, ಗೋಕುರಮ್ಮ ಪಾಲ್ಗೊಂಡಿದ್ದರು.
ಕಾರ್ಮಿಕ ವಿರೋಧಿ ನೀತಿಗಳನ್ನು ರದ್ದುಗೊಳಿಸಿ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನ ವಿರೋ ನೀತಿ ಹಿಂಪಡೆಯುವಂತೆ ಒತ್ತಾಯಿಸಿ ರಾಯಚೂರಿನ ಅಂಬೇಡ್ಕರ್ ವೃತ್ತದಲ್ಲಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಸಮಿತಿ ಪದಾಕಾರಿಗಳಾದ ಕೆ.ಜಿ.ವೀರೇಶ, ಡಿ.ಎಸ್.ಶರಣಬಸವ, ಮಹೇಶ ಚೀಕಲಪರ್ವಿ, ಮಾರೆಪ್ಪ ಹರವಿ, ಆಂಜಿನೇಯ ಕುರುಬದೊಡ್ಡಿ, ಬೂದೆಪ್ಪ ಗಬ್ಬೂರು, ಎಚ್.ಪದ್ಮಾ, ಕರಿಯಪ್ಪ ಅಚ್ಚೊಳ್ಳಿ, ಮಲ್ಲನಗೌಡ, ಶರಣಮ್ಮ, ಗೋಕುರಮ್ಮ ಇದ್ದರು.