ಅವ್ಯವಹಾರ ಆರೋಪ, ತಲೆಮರೆಸಿಕೊಂಡಿದ್ದಾತ ಸೆರೆ

New Project (33)
Published on

ಬೆಳ್ತಂಗಡಿ: ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂದಲ್ಲಿ ನಡೆದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಬ್ಯಾಂಕ್ ಮಾಜಿ ಸಿಬ್ಬಂದಿ ಸದಾಶಿವ ಯಾನೆ ಸುಜಿತ್ ಎಂಬಾತ ಬಂಧಿತ ಆರೋಪಿ.

ಮಂಗಳೂರಿನ ಪಡೀಲ್‌ನಲ್ಲಿ ತಲೆಮರೆಸಿಕೊಂಡಿದ್ದ ಈತನನ್ನು ಧರ್ಮಸ್ಥಳ ಸಬ್ ಇನ್‌ಸ್ಪೆಕ್ಟರ್ ಸಮರ್ಥ್ ಆರ್. ಗಾಣಿಗೇರ ನೇತೃತ್ವದ ತಂಡ ಖಚಿತ ಮಾಹಿತಿ ಮೇರೆಗೆ ಸೆ.5ರಂದು ವಶಕ್ಕೆ ಪಡೆದಿದ್ದರು. ಆರೋಪಿಯನ್ನು ಸೆ.6ರಂದು ಸಂಜೆ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net