ಬಣ್ಣದ ಹೆಸರಲ್ಲಿ ಭಾರತೀಯರ ನಿಂದನೆ: ಸ್ಯಾಮ್​ ಪಿತ್ರೋಡಾ ಹೇಳಿಕೆಗೆ ಅಣ್ಣಾಮಲೈ ತಿರುಗೇಟು

y
Published on

ಚೆನ್ನೈ: ದೇಶಾದ್ಯಂತ ಲೋಕಸಭಾ ಚುನಾವಣೆಯ ಪ್ರಚಾರ ಜೋರಾಗಿರುವಾಗಲೇ ಕಾಂಗ್ರೆಸ್, ಬಿಜೆಪಿ ಮಧ್ಯೆ ವಾಕ್ಸಮರ ತಾರಕಕ್ಕೇರಿದೆ. ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಅವರು ಇವತ್ತು ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದು, ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ತಿರುಗೇಟು ನೀಡಿದ್ದಾರೆ.

ನಾನು ಡಾರ್ಕ್‌ ಸ್ಕಿನ್‌ ಭಾರತೀಯ ಎಂದು ಹೇಳುವ ಮೂಲಕ ಅಣ್ಣಾಮಲೈ ಅವರು ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾಗೆ ಟಾಂಗ್ ಕೊಟ್ಟಿದ್ದಾರೆ.

ಸ್ಯಾಮ್‌ ಪಿತ್ರೋಡಾ ಹೇಳಿಕೆ ದುರದೃಷ್ಟಕರವಾಗಿದೆ. ಯಾಕೆಂದರೆ ಆಫ್ರಿಕನ್ನರು, ಚೈನೀಸ್, ಅರಬ್ಬರು, ಬಿಳಿಯರು ಇದನ್ನು ನಾನು ತಪ್ಪು ಎಂದು ಹೇಳುತ್ತಿಲ್ಲ, ಪರವಾಗಿಲ್ಲ. ಅವರು ತಮ್ಮದೇ ಆದ ಸಂಸ್ಕೃತಿ ಮತ್ತು ನಾಗರಿಕತೆಯನ್ನು ಹೊಂದಿದ್ದಾರೆ ಎಂದರು.

ಕಾಂಗ್ರೆಸ್​ ನಾಯಕ ಸ್ಯಾಮ್ ಪಿತ್ರೋಡಾ ಏನು ಹೇಳಿದ್ರು: ಭಾರತದ ಪೂರ್ವ ಭಾಗದವರು ಚೀನಾದವರಂತೆ ಕಾಣುತ್ತಾರೆ, ದಕ್ಷಿಣ ಭಾರತೀಯರು ಆಫ್ರಿಕರನ್ನರಂತೆ ಕಾಣುತ್ತಾರೆ. ಇನ್ನು, ಭಾರತದ ಪಶ್ಚಿಮ ಭಾಗದವರು ಅರಬ್ಬರಂತೆ ಕಂಡರೆ, ಉತ್ತರ ಭಾರತೀಯರು ಬಿಳಿ ಚರ್ಮವುಳ್ಳವರಾಗಿದ್ದಾರೆ. ತಮ್ಮ ಬಣ್ಣ, ಸಂಸ್ಕೃತಿಗಳಲ್ಲಿ ಇಂತಹ ಹಲವಾರು ವ್ಯತ್ಯಾಸಗಳಿದ್ದರೂ ಭಾರತೀಯರೆಲ್ಲರೂ ಉತ್ತಮವಾಗಿ, ಸಂತೋಷವಾಗಿ ಜೀವನ ನಡೆಸುತ್ತಿದ್ದಾರೆ.  ವೈವಿಧ್ಯತೆಗಳ ನಡುವೆಯೂ ಒಗ್ಗಟ್ಟಿನಿಂದ, ಸಹಮತದಿಂದ ಜೀವನ ಸಾಗಿಸುತ್ತಿರುವುದೇ ಭಾರತೀಯರ ಹೆಗ್ಗಳಿಕೆಯಾಗಿದೆ ಎಂದಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net