Thursday, 13th December 2018  

Vijayavani

ಕಬ್ಬು ದರ ಬಾಕಿ ನೀಡಲು ರೈತರ ಆಗ್ರಹ -ಸುವರ್ಣ ಸೌಧದಕ್ಕೆ ಮುತ್ತಿಗೆ ಯತ್ನ - ಪೊಲೀಸರೊಂದಿಗೆ ಅನ್ನದಾತರ ಜಟಾಪಟಿ        ರಾಜಸ್ಥಾನ ಸಿಎಂ ಆಗಿ ಗೆಹ್ಲೋಟ್ ಹೆಸರು ಫೈನಲ್ - ರಾಹುಲ್ ಆಪ್ತ ಸಚಿನ್ ಪೈಲಟ್​ಗೆ ಡಿಸಿಎಂ ಪಟ್ಟ - ಅಧಿಕೃತ ಘೋಷಣೆ ಬಾಕಿ        ಬಳ್ಳಾರಿಯ ಮೈಲಾರದಲ್ಲಿ ಗೊರವಯ್ಯನ ಗಲಾಟೆ - ಸಣ್ಣಪ್ಪ ಮಲ್ಲಪ್ಪನವರಿಗೆ ಗೊರವಯ್ಯನ ದೀಕ್ಷೆ ಕೊಟ್ಟಿದ್ದಕ್ಕೆ ವಿರೋಧ         ಟ್ರಿನಿಟಿ ಸರ್ಕಲ್​​ನಲ್ಲಿ ಮೆಟ್ರೋ ಪಿಲ್ಲರ್ ಬಿರುಕು - ಜೀವದ ಜತೆ ಚೆಲ್ಲಾಟ ಬೇಡ - ದಿಗ್ವಿಜಯ ನ್ಯೂಸ್ ಜತೆ ಎಕ್ಸ್​​ಪರ್ಟ್​​ಗಳ ಮಾತು        ತಿರುವನಂತಪುರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ -ಹಿಂಸಾಚಾರಕ್ಕೆ ಯತ್ನ, ಪೊಲೀಸರಿಂದ ಲಾಠಿಚಾರ್ಜ್       
Breaking News

ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್​ಪಾಸ್ ನೀಡಲು ಆಗ್ರಹಿಸಿ ಪ್ರತಿಭಟನೆ

Thursday, 14.06.2018, 5:37 PM       No Comments

ಶಿವಮೊಗ್ಗ: ಎಲ್ಲ ವಿದ್ಯಾರ್ಥಿಗಳಿಗೂ ಉಚಿತವಾಗಿ ಕೆಎಸ್​ಆರ್​ಟಿಸಿ ಬಸ್​ಪಾಸ್ ನೀಡುವ ಹಿಂದಿನ ಸರ್ಕಾರದ ತೀರ್ವನವನ್ನು ಕೈ ಬಿಡಲು ಮುಂದಾಗಿರುವ ಸಾರಿಗೆ ಸಚಿವರ ಕ್ರಮ ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಮಹಾವೀರ ವೃತ್ತದಲ್ಲಿ ಮಾನವ ಸರಪಳಿ ನಿರ್ವಿುಸಿ ಕೆಲ ಕಾಲ ರಸ್ತೆ ತಡೆ ನಡೆಸಿ, ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

2018-19ನೇ ಸಾಲಿನ ಬಜೆಟ್​ನಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್​ಪಾಸ್ ನೀಡುವುದಾಗಿ ಘೊಷಣೆ ಮಾಡಿತ್ತು. ಆದರೆ ಈಗಿನ ಸರ್ಕಾರ ಈ ಯೋಜನೆಯನ್ನು ಜಾರಿಗೊಳಿಸದೆ ಕೇವಲ ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಬಸ್​ಪಾಸ್ ನೀಡಲು ಮುಂದಾಗಿದೆ ಎಂದು ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದರು.

ಪ್ರಸಕ್ತ ವರ್ಷದಲ್ಲಿ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಸ್ ಪಾಸ್​ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಉಚಿತ ಬಸ್​ಪಾಸ್ ನೀಡುವುದರಿಂದ ಅತಿ ಹೆಚ್ಚು ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಹೋಗಲು ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದರು.

ಎಬಿವಿಪಿ ಈಗಾಗಲೇ ಉಚಿತ ಬಸ್​ಪಾಸ್​ಗಾಗಿ ರಾಜ್ಯಾದ್ಯಂತ ಹೋರಾಟ ನಡೆಸಿ ಶಿಕ್ಷಣ, ಹಣಕಾಸು ಮತ್ತು ಸಾರಿಗೆ ಇಲಾಖೆಗಳ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಸರ್ಕಾರದ ಮಟ್ಟದಲ್ಲಿ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ರಾಜ್ಯಾದ್ಯಂತ ಜೂ. 7ರಿಂದ ಬಸ್​ಪಾಸ್ ವಿತರಿಸಲಾಗುತ್ತಿದೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಎಲ್ಲ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್​ಪಾಸ್ ನೀಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಎಬಿವಿಪಿ ವಿಭಾಗ ಸಹ ಸಂಚಾಲಕ ಸಚಿನ್ ರಾಯ್ಕರ್, ನಗರ ಕಾರ್ಯದರ್ಶಿ ಎನ್.ಅಭಿಷೇಕ್, ಪ್ರಮುಖರಾದ ವಿನಾಯಕ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

 

Leave a Reply

Your email address will not be published. Required fields are marked *

Back To Top