More

    ಡ್ರಗ್ ಮಾಫಿಯಾ ಮಟ್ಟ ಹಾಕಿ ; ತುಮಕೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಎಬಿವಿಪಿ ಕಾರ್ಯಕರ್ತರ ಪ್ರತಿಭಟನೆ

    ತುಮಕೂರು: ರಾಜ್ಯಾದಂತ ವ್ಯಾಪಿಸಿರುವ ಡ್ರಗ್ಸ್ ದಂಧೆಯ ಹಿಂದೆ ರಾಷ್ಟ್ರಘಾತುಕರ ಸಂಚಿದ್ದು, ದಂಧೆಯಲ್ಲಿ ಭಾಗಿಯಾದವರ ವಿರುದ್ಧ ದೇಶದ್ರೋಹಿ ಪ್ರಕರಣ ದಾಖಲಿಸುವ ಮೂಲಕ ಆರೋಗ್ಯಯುತ ಸಮಾಜ ನಿರ್ಮಿಸಬೇಕು ಎಂದು ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟಿಸಿದರು.

    ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಯುವ ಸಮೂಹ ಹಾಳು ಮಾಡುವ ಮೂಲಕ ದೇಶಾಭಿವೃದ್ಧಿಗೆ ಪೆಟ್ಟು ನೀಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ಜಿಲ್ಲಾ ಸಂಟನಾ ಕಾರ್ಯದರ್ಶಿ ಅಪ್ಪು ಪಾಟೀಲ ಮಾತನಾಡಿ, ಚಂದನವನದಲ್ಲಿ ನಟ, ನಟಿಯರು ಐಷಾರಾಮಿ ಬದುಕಿಗಾಗಿ ಡ್ರಗ್ಸ್ ಮಾರಾಟ ಜಾಲದಲ್ಲಿ ನೇರವಾಗಿ ಭಾಗಿಯಾಗುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು ಯುವ ಸಮೂಹ ದಾರಿತಪ್ಪಿಸುವ ಇಂತಹವರ ವಿರುದ್ಧ ಕಠಿಣ ಕ್ರಮ ಅಗತ್ಯವಿದೆ ಎಂದರು.

    ಈ ಸಮಾಜಘಾತುಕ ಚಟುವಟಿಕೆಯ ಹಿಂದೆ ಪ್ರತಿಷ್ಠಿತ ಪ್ರಭಾವಿ ಶ್ರೀಮಂತ ಕುಟುಂಬಗಳ ವ್ಯಕ್ತಿಗಳು, ಸಿನಿವಾ ನಟ, ನಟಿಯರು, ರಾಜಕಾರಣಿಗಳ ಮಕ್ಕಳು ಇರುವ ವಾಹಿತಿಗಳು ವಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ, ಇಂತಹವರನ್ನು ಗುರುತಿಸಿ ಕಠಿಣ ಕ್ರಮಕೈಗೊಳ್ಳಬೇಕು ಎಂದರು.

    ಡ್ರಗ್ಸ್ ಜಾಲದ ಪಿಡುಗಿನಿಂದ ದೇಶದ ಯುವ ಶಕ್ತಿಯನ್ನು ರಕ್ಷಿಸಿಕೊಳ್ಳಲು ಡ್ರಗ್ಸ್ ಜಾಲವನ್ನು ಸಂಪೂರ್ಣವಾಗಿ ಬುಡಸಮೇತ ಕಿತ್ತು ಹಾಕಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು. ಡ್ರಗ್ಸ್ ದುಷ್ಪರಿಣಾಮದ ಬಗ್ಗೆ ಎಬಿವಿಪಿ 2014ರಲ್ಲಿಯೇ ಶಾಲೆ, ಕಾಲೇಜು ಕ್ಯಾಂಪಸ್‌ಗಳಲ್ಲಿನ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಇಡೀ ದೇಶ್ಯಾದ್ಯಂತ ‘ ನಶಾಮುಕ್ತ ಭಾರತ’ ಎಂಬ ಅಭಿಯಾನ ನಡೆಸಿದ್ದನ್ನು ಸ್ಮರಿಸಿದರು.

    ತುಮಕೂರು ನಗರದಲ್ಲಿಯೂ ಡ್ರಗ್ಸ್, ಗಾಂಜಾ ಮಾರಾಟ ಅವ್ಯಾಹತವಾಗಿ ನಡೆಯುತ್ತಿದ್ದು, ಯುವಕರು ಆಕರ್ಷಿತರಾಗಿ ದಾಸರಾಗುವ ಬಗ್ಗೆಯೂ ವದಂತಿಗಳಿವೆ. ಈ ಬಗ್ಗೆ ಪೊಲೀಸರು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಎಬಿವಿಪಿ ಕಾರ್ಯಕರ್ತರಾದ ಜಗದೀಶ್, ರಾಧಕೃಷ್ಣ, ಕುವಾರಸ್ವಾಮಿ, ಪ್ರಶಾಂತ, ಹಿಮೇಶ್, ನರಸಿಂಹ, ಸಿದ್ದು, ಮಂಜು, ತರುಣ್, ಸುರೇಶ್, ತಿಪ್ಪೇಸ್ವಾಮಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts