More

    ಸಿಇಟಿ ಸಮಸ್ಯೆ ಸೃಷ್ಟಿಸಿದ ಅಧಿಕಾರಿಗಳ ವಜಾಕ್ಕೆ ಎಬಿವಿಪಿ ಆಗ್ರಹ

    ಬೆಂಗಳೂರು ಸಿಇಟಿ ಸಮಸ್ಯೆಯನ್ನು ಬಗೆಹರಿಸಿ ರಾಜ್ಯದ ಲಕ್ಷಾಂತರ ಬಡ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸರಿಯಾದ ಒದಗಿಸಬೇಕು ಮತ್ತು ಸಮಸ್ಯೆಯನ್ನು ಸೃಷ್ಟಿಸಿರುವ ಅಧಿಕಾರಿಗಳನ್ನು ತಕ್ಷಣವೇ ವಜಾಗೊಳಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಆಗ್ರಹಿಸಿದೆ.

    ಸೋಮವಾರ ಮಲ್ಲೇಶ್ವರದ ಕರ್ನಾಟಕದ ಪರೀಕ್ಷಾ ಪ್ರಾಧಿಕಾರದ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಹೋರಾಟಗಾರರು, ಸಿಇಟಿ ಪರೀಕ್ಷೆಯಲ್ಲಿ ಹಿಂದೆಂದೂ ನಡೆಯದಂತಹ ಅವಾಂತರ ಮತ್ತು ಗೊಂದಲ ಈ ಬಾರಿಯ ಪರೀಕ್ಷೆಯಲ್ಲಿ ನಡೆದಿರುವುದು ವಿಷಾದನೀಯ. ಭೌತಶಾಸದಲ್ಲಿ 10, ರಸಾಯನಶಾಸ-23, ಗಣಿತ-14 ಮತ್ತು ಜೀವಶಾಸದಲ್ಲಿ 12 ಔಟ್ ಆ್ ಸಿಲಬಸ್ ಪ್ರಶ್ನೆಗಳು ಬಂದಿರುವುದು ವಿದ್ಯಾರ್ಥಿಗಳ ಪಾಲಿಗೆ ಸಮಸ್ಯೆಯನ್ನುಂಟು ಮಾಡಿವೆ. ಕೆಇಎ ನಲ್ಲಿ ಕೇವಲ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ನೇಮಕ ಮಾಡಿಕೊಂಡಿರುವುದು ಇದಕ್ಕೆಲ್ಲಾ ಕಾರಣವಾಗಿದೆ ಎಂದು ಆರೋಪಿಸಿದರು.

    ಪೊಲೀಸರೊಂದಿಗೆ ವಾಗ್ವಾದ:

    ಪ್ರತಿಭಟನಾಕಾರರು ಹೋರಾಟ ಪ್ರತಿಭಟನೆ ನಡೆಸಲು ಪೊಲೀಸರು ಅಡ್ಡಿಪಡಿಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ ಮಾತ್ರ ಪ್ರತಿಭಟನೆ ನಡೆಸಬೇಕು. ಇಲ್ಲಿ ಪ್ರತಿಭಟನೆ ನಡೆಸಲು ಅವಕಾಶವಿಲ್ಲವೆಂದು ಬ್ಯಾರಿಕೇಡ್ ಹಾಕಿದ್ದರು. ಆದರೆ, ಎಬಿವಿಪಿ ಕಾರ್ಯಕರ್ತರು ಕೆಇಎ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ವಾಗ್ವಾದಕ್ಕೆ ಕಾರಣವಾಯಿತು.
    ಪ್ರತಿಭಟನೆಗೆ ಅಡ್ಡಿಪಡಿಸಬೇಡಿ ಶಾಂತಯುತ ಪ್ರತಿಭಟನೆ ನಡೆಸುತ್ತೇವೆಂದು ಮನವಿ ಮಾಡಿದರೂ ಪೊಲೀಸರು ಅವಕಾಶ ಕಲ್ಪಿಸದೆ ಬಸ್ಸಿನಲ್ಲಿ ಕಾರ್ಯಕರ್ತರನ್ನು ತುಂಬಿಕೊಂಡು ಹೋದರು.

    ಕೆಇಎ ಇಡಿ ವಿರುದ್ಧ ಅಸಮಾಧಾನ

    ಕೆಇಎ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರೂ ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕರು ಮನವಿ ಸ್ವೀಕರಿಸಲು ಬಾರದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಅಧಿಕಾರಿಗಳು ಹೋರಾಟಗಾರರ ಮನವಿ ಸ್ವೀಕರಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಧಿಕಾರಿಗಳು ಮಾಡಬೇಕಾದ ಕೆಲಸವಾಗಿದೆ. ಆದರೆ, ಅಧಿಕಾರಿಗಳು ಯಾವುದೇ ರೀತಿಯಲ್ಲಿ ಸ್ಪಂದಿಸದಿರುವುದು ಸರಿಯಲ್ಲ ಎಂದು ಟೀಕಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts