More

    ಡ್ರಗ್ಸ ಜಾಲದ ವಿರುದ್ಧ ಕಠಿಣ ಕ್ರಮಕೈಗೊಳ್ಳಿ

    ಚಿಕ್ಕೋಡಿ: ರಾಜ್ಯದಲ್ಲಿ ಯುವ ಜನತೆಯನ್ನು ಹಾಳು ಮಾಡುತ್ತಿರುವ ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಗುರುವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಚಿಕ್ಕೋಡಿ ತಾಲೂಕು ಘಟಕದ ಸದಸ್ಯರು ಉಪವಿಭಾಗಾಧಿಕಾರಿ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

    ಡ್ರಗ್ಸ್ ದಂಧೆಯ ಹಿಂದೆ ರಾಷ್ಟ್ರಘಾತುಕರ ಸಂಚಿದ್ದು, ರಾಜ್ಯದ ಹಲವು ಶಾಲಾ-ಕಾಲೇಜುಗಳಲ್ಲಿ ಡ್ರಗ್ಸ್ ಜಾಲ ವ್ಯವಸ್ಥಿತವಾಗಿ ಕೋಡ್‌ವರ್ಡ್‌ಗಳ ಮೂಲಕ ನಡೆಯುತ್ತಿದೆ. ಇದರಿಂದ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಡ್ರಗ್ ಅಡಿಕ್ಟ್ ಆಗುತ್ತಿರುವುದು ಒಂದು ರೀತಿಯಲ್ಲಿ ಫ್ಯಾಶನ್ ಆಗಿ ಮಾರ್ಪಾಡಾಗುತ್ತಿರುವ ಅಂಶವೂ ಬಯಲಾಗುತ್ತಿದೆ ಎಂದರು.

    ಸಮಾಜಕ್ಕೆ ಮಾದರಿಯಾಗಬೇಕಿದ್ದ ಯುವಜನರು ಇಂತಹ ಚಟಗಳಿಗೆ ಅಂಟಿಕೊಂಡಿರುವುದು ಬೇಸರದ ಸಂಗತಿಯಾಗಿದ್ದು. ಇದು ಯುವ ಶಕ್ತಿಯ ನಾಶಕ್ಕೆ ಕಾರಣವಾಗಿದೆ. ಈ ಕೂಡಲೇ ಸರ್ಕಾರ ತನಿಖೆಯನ್ನು ಚುರುಕುಗೊಳಿಸಿ ಡ್ರಗ್ಸ್ ದಂಧೆಯಲ್ಲಿ ತೊಡಗಿಕೊಂಡಿರುವವರಿಗೆ ದೇಶದ್ರೋಹ ಪ್ರಕರಣ ದಾಖಲಿಸುವ ಮೂಲಕ ಡ್ರಗ್ಸ್ ಜಾಲವನ್ನು ಬೇರು ಸಮೇತ ಕಿತ್ತುಹಾಕುವ ಮೂಲಕ ಇಂತಹ ದುಶ್ಚಟಗಳಿಂದ ಯುವ ಶಕ್ತಿಯನ್ನು ರಕ್ಷಿಸಬೇಕು ಎಂದು ಆಗ್ರಹಿಸಿದರು.

    ಎಬಿವಿಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಮಲ್ಲಿಕಾರ್ಜುನ ಈಟಿ, ಚಿಕ್ಕೋಡಿ ತಾಲೂಕು ಘಟಕದ ಸದಸ್ಯರಾದ ಸುದೀಪ ಬೀರನಗಡ್ಡಿ, ಪ್ರಸಾದ ಹನಿಮನಾಳ, ಲಕ್ಷ್ಮಣ ಖಗ್ಗಣ್ಣವರ, ಅಕ್ಷತಾ ಹಿರೇಮಠ, ಅಮಿತ ಬಾನಿ, ರಾಕೇಶ ಕಮತೆ, ಮಾಳಪ್ಪ ಮರ್ಯಾಯಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts