More

    ನೇಹಾ ಹಿರೇಮಠ ಹಂತಕನಿಗೆ ಶಿಕ್ಷೆಯಾಗಲಿ

    ವಿರಾಜಪೇಟೆ: ಹಾಡಹಗಲೇ ವಿದ್ಯಾರ್ಥಿನಿ ನೇಹಾಳನ್ನು ಕೊಲೆ ಮಾಡಿದ ಯುವಕನ ವಿರುದ್ಧ ಸರ್ಕಾರ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು. ವಿದ್ಯಾರ್ಥಿಗಳಿಗೆ ಭದ್ರತೆ ಒದಗಿಸಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕದಿಂದ ವಿರಾಜಪೇಟೆ ಉಪ ತಹಸೀಲ್ದಾರ್ ಎಚ್.ಬಿ.ಪ್ರದೀಪ್‌ಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

    ವಿದ್ಯಾರ್ಥಿ ಪ್ರಮುಖ್ ರಕ್ಷಿತಾ ಮಾತನಾಡಿ, ವಿದ್ಯಾರ್ಥಿಗಳಿಗೆ ಅಭದ್ರತೆ ಕಾಡುತ್ತಿದೆ. ಲವ್ ಜಿಹಾದ್ ಹೆಸರಿನಲ್ಲಿ ಪ್ರೀತಿಯ ನಾಟಕವಾಡಿ ವಿದ್ಯಾರ್ಥಿನಿಯನ್ನು ಹತ್ಯೆ ಮಾಡಲಾಗಿದೆ. ಕಾಲೇಜಿನ ಆವರಣಕ್ಕೆ ಭಯವಿಲ್ಲದೆ ಪ್ರವೇಶ ಮಾಡಿ ವಿದ್ಯಾರ್ಥಿಗಳ ಸಮ್ಮುಖದಲ್ಲೇ ನೇಹಾಳನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವುದದರಿಂದ ಭಯದ ವಾತಾವರಣ ಸೃಷ್ಟಿಯಾಗಿದೆ. ಇದರಿಂದ ವಿದ್ಯಾರ್ಥಿ ಸಮುದಾಯವು ಆತಂಕದಲ್ಲೇ ಕಾಲೇಜಿಗೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಹತ್ಯೆ ಮಾಡಿದವನಿಗೆ ಉಗ್ರ ಶಿಕ್ಷೆ ವಿಧಿಸಬೇಕು. ನೇಹಾ ಕುಟುಂಬಕ್ಕೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದರು.

    ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ದಕ್ಷಿಣ ಕೊಡಗು ಜಿಲ್ಲಾ ಘಟಕದ ವಿದ್ಯಾರ್ಥಿ ಪ್ರಮುಖರಾದ ಧನೇಶ್ ಪೂನ್ನಣ್ಣ, ದಕ್ಷ, ದೀಕ್ಷಿತ್ ಪೊನ್ನಮ್ಮ ಮತ್ತು ಸಂಘಟನೆಯ ವಿದ್ಯಾರ್ಥಿ ಸದಸ್ಯರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts