More

    ಸ್ವಚ್ಛತೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

    ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಅವಳಿ ನಗರ ಸ್ವಚ್ಛತೆಗೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಇಲ್ಲಿಯ ಪಾಲಿಕೆ ಆಯುಕ್ತರ ಕಚೇರಿ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

    ಹುಬ್ಬಳ್ಳಿ-ಧಾರವಾಡದಲ್ಲಿ ಎಲ್ಲೆಡೆ ಕಸದ ರಾಶಿಯೇ ಕಾಣುತ್ತಿದ್ದು, ಅನೈರ್ಮಲ್ಯದ ವಾತಾವರಣ ನಿರ್ವಣಗೊಂಡಿದೆ. ಸ್ವಚ್ಛತೆ ಕಾಪಾಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

    ಪಾಲಿಕೆ ಅಧಿಕಾರಿಯೊಬ್ಬರು ಮನವಿ ಸ್ವೀಕರಿಸಲು ಆಗಮಿಸಿದಾಗ ವಿದ್ಯಾರ್ಥಿಗಳು ಮೇಯರ್ ಅಥವಾ ಆಯುಕ್ತರು ಆಗಮಿಸಬೇಕೆಂದು ಪಟ್ಟು ಹಿಡಿದರು. ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ಆಯುಕ್ತರು ಹಾಗೂ ಮೇಯರ್ ಅವರು ಆಗಮಿಸದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ವಿದ್ಯಾರ್ಥಿಗಳು, ಪಾಲಿಕೆ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಪೊಲೀಸರು ಅದಕ್ಕೆ ಅವಕಾಶ ನೀಡಲಿಲ್ಲ.

    ಉಪ ಮೇಯರ್ ಸತೀಶ ಹಾನಗಲ್ ಹಾಗೂ ಪಾಲಿಕೆ ಅಧೀಕ್ಷಕ ಇಂಜಿನಿಯರ್ ಇ. ತಿಮ್ಮಪ್ಪ ಮನವಿ ಸ್ವೀಕರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts