More

    ಆರ್‌ಸಿಯು ಅವೈಜ್ಞಾನಿಕ ಶೈಕ್ಷಣಿಕ ನೀತಿ ಖಂಡಿಸಿ ಎಬಿವಿಪಿ ಪ್ರತಿಭಟನೆ

    ವಿಜಯಪುರ: ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಅವೈಜ್ಞಾನಿಕ ನೀತಿ ಖಂಡಿಸಿ ಎಬಿವಿಪಿ ಕಾರ್ಯಕರ್ತರು ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿದರು.
    ನಗರದ ಸಿದ್ಧೇಶ್ವರ ದೇವಸ್ಥಾನದಿಂದ ಮಹಾತ್ಮ ಗಾಂಧಿ, ಬಸವೇಶ್ವರ ವೃತ್ತದ ಮಾರ್ಗವಾಗಿ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ವಿಶ್ವ ವಿದ್ಯಾಲಯದ ವಿರುದ್ಧ ಘೋಷಣೆ ಕೂಗಿದರು.

    ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ ಮಾತನಾಡಿ, ರಾಣಿ ಚನ್ನಮ್ಮ ವಿವಿ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಆಡಳಿತ ಮಾಡುವ ಕೇಂದ್ರಗಳಾಗಿದ್ದು, ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುತ್ತಿಲ್ಲ ಎಂದು ಆರೋಪಿಸಿದರು.

    ಪ್ರಾಂತ ಸಹ ಸಂಘಟನಾ ಕಾರ್ಯದರ್ಶಿ ಗಂಗಾಧರ ಹಂಜಗಿ ಮಾತನಾಡಿ, ವಿಶ್ವ ವಿದ್ಯಾಲಯದಿಂದ ಸಮಯಕ್ಕೆ ಸರಿಯಾಗಿ ಫಲಿತಾಂಶ ಪ್ರಕಟಿಸಲಾಗುತ್ತಿಲ್ಲ. ನೀಡಿರುವ ಫಲಿತಾಂಶದಲ್ಲೂ ಅನೇಕ ಗೊಂದಲಗಳು ಸೃಷ್ಠಿಯಾಗಿವೆ. ಕೆಲವೊಂದು ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶ ಬಂದು ವರ್ಷವಾದರೂ ಈವರೆಗೂ ಅಂಕಪಟ್ಟಿಗಳು ದೊರಕಿಲ್ಲ. ಉತ್ತೀರ್ಣರಾದರೂ ಅನುತ್ತೀರ್ಣ ಎಂದು ತೋರಿಸಲಾಗುತ್ತಿದೆ. ವಿಶ್ವ ವಿದ್ಯಾಲಯದ ಸಹಾಯವಾಣಿಯಿಂದ ಯಾವುದೇ ಉಪಯೋಗವಾಗುತ್ತಿಲ್ಲ. ವಿಶ್ವವಿದ್ಯಾಲಯಕ್ಕೆ ಅನುದಾನದ ಕೊರತೆಯೂ ಕಾಡುತ್ತಿದೆ. ಅಂಕಪಟ್ಟಿಯ ಶುಲ್ಕವನ್ನು ಕಟ್ಟಿಸಿಕೊಂಡ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಮೂಲ ಅಂಕಪಟ್ಟಿ ನೀಡದೆ ವಿದ್ಯಾರ್ಥಿ ವೇತನ ಹಾಗೂ ಇನ್ನಿತರ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಮಾಡುತ್ತಿದೆ. ಪರೀಕ್ಷಾ ವೇಳಾಪಟ್ಟಿಯನ್ನು ಪದೇ ಪದೇ ಬದಲಾವಣೆ ಮಾಡಿ ವಿದ್ಯಾರ್ಥಿಗಳಿಗೆ ಯಾವಾಗ ಪರೀಕ್ಷೆ ನಡೆಯುತ್ತದೆಯೋ ಇಲ್ಲವೋ ಎಂಬ ಗೊಂದಲ ಸೃಷ್ಟಿ ಮಾಡುತ್ತಿದೆ ಎಂದರು.

    ಜಿಲ್ಲಾ ಸಂಚಾಲಕ ಮಂಜುನಾಥ ಹಳ್ಳಿ, ಹರ್ಷ ನಾಯಕ, ರೇಖಾ ಮಾಳಿ, ಕವಿತಾ ಬಿರಾದಾರ, ಸಿದ್ದು ಪತ್ತಾರ, ಶಿವನಗೌಡ ಬಿರಾದಾರ, ಮಲ್ಲಿಕಾರ್ಜುನ ಮಾಳಿ, ಮಾಂತೇಶ ಕಂಬಾರ, ಶ್ರೀಕಾಂತ ರೆಡ್ಡಿ, ಪ್ರವೀಣ ಬಿರಾದಾರ, ಅಭಿಷೇಕ ಬಿರಾದಾರ, ಅಭಿಷೇಕ ಗುಡದಿನ್ನಿ, ಸಂದೀಪ ಅರಳಗುಂಡಗಿ, ಐಶ್ವರ್ಯ ಆಸಂಗಿ, ಪೂಜಾ ವೀರಶೆಟ್ಟಿ, ಶಿಲ್ಪಾ ಪೂಜಾರಿ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts