ಮಧ್ವ ವಾದಿರಾಜ ತಾಂತ್ರಿಕ ವಿದ್ಯಾಲಯಕ್ಕೆ ಶೈಕ್ಷಣಿಕ ಸ್ವಾಯತ್ತತೆ

blm (3)
Published on

ಶಿರ್ವ: ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಿದ್ದು, ಶೈಕ್ಷಣಿಕ ಸ್ವಾಯತ್ತತೆ ಹಾಗೂ ಎಲ್ಲ ಅರ್ಹ ಬಿ.ಇ ಕೋರ್ಸ್‌ಗಳಿಗೆ ರಾಷ್ಟ್ರೀಯ ಮೌಲ್ಯಂಕನ ಮಂಡಳಿಯಿಂದ ವಾನ್ಯತೆ ಪಡೆದುಕೊಂಡಿದೆ.

ನವದೆಹಲಿಯ ವಿಶ್ವವಿದ್ಯಾನಿಲಯ ಅನುದಾನ ಆಯೋಗವು (ಯುಜಿಸಿ) ಸಂಸ್ಥೆಯ ಶೈಕ್ಷಣಿಕ ಗುಣಮಟ್ಟದ ಮೌಲ್ಯವಾಪನ ನಡೆಸಿ, ಕರ್ನಾಟಕ ರಾಜ್ಯದ ಉನ್ನತ ಶಿಕ್ಷಣ ಪರಿಷತ್ತು ಮತ್ತು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಶಿಫಾರಸ್ಸಿನ ಮೇರೆಗೆ 2025-26ನೇ ಶೈಕ್ಷಣಿಕ ವರ್ಷದಿಂದ ಮುಂದಿನ ಹತ್ತು ವರ್ಷಗಳ ವರೆಗೆ ಶೈಕ್ಷಣಿಕ ಸ್ವಾಯತ್ತತೆ ಮಂಜೂರು ವಾಡಿದೆ ಎಂದು ಆಡಳಿತ ಮಂಡಳಿ ಕಾರ್ಯದರ್ಶಿ ರತ್ನಕುವಾರ್ ಹೇಳಿದರು.

ಇನ್ನಂಜೆ ಎಸ್.ವಿ.ಎಚ್ ಕಾಲೇಜಿನಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರಾಷ್ಟ್ರೀಯ ಮೌಲ್ಯಂಕನ ಮಂಡಳಿ ಇತ್ತೀಚೆಗೆ ವಿದ್ಯಾಸಂಸ್ಥೆಯ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಕೋರ್ಸ್‌ಗೆ ವಾನ್ಯತೆ ನೀಡಿದ್ದು, ಈ ಮೂಲಕ ಎಲ್ಲ ಅರ್ಹ ಪದವಿ ಕೋರ್ಸ್‌ಗಳು ಮಂಡಳಿಯಿಂದ ವಾನ್ಯತೆ ಪಡೆದಂತಾಗಿದೆ ಎಂದರು.

ವಿದ್ಯಾಸಂಸ್ಥೆಯು ರಾಷ್ಟ್ರೀಯ ಮೌಲ್ಯವಾಪನ ಮತ್ತು ವಾನ್ಯತಾ ಪರಿಷತ್ ನಿಂದ ಎರಡನೇ ಬಾರಿ ಎ ಶ್ರೇಣಿಯ ಮೌಲ್ಯಂಕನ ಪಡೆದುಕೊಂಡಿದೆ. ರಾಜ್ಯದಲ್ಲಿರುವ ಸುವಾರು 250ಕ್ಕೂ ಮಿಕ್ಕಿ ತಾಂತ್ರಿಕ ಶಿಕ್ಷಣ ವಿದ್ಯಾಸಂಸ್ಥೆಗಳಲ್ಲಿ 15 ವರ್ಷಗಳ ಸೇವಾವಧಿಯಲ್ಲಿ ಶೈಕ್ಷಣಿಕ ಸ್ವಾಯತ್ತತೆ ಪಡೆದ ಬೆರಳೆಣಿಕೆಯ ವಿದ್ಯಾಸಂಸ್ಥೆಗಳಲ್ಲಿ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯವೂ ಒಂದಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ರಾಧಾಕೃಷ್ಣ ಎಸ್.ಐತಾಳ್, ಆಡಳಿತ ಮಂಡಳಿ ಸದಸ್ಯ ಹರೀಶ್ ಬೆಳ್ಮಣ್, ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್ ಉಪಸ್ಥಿತರಿದ್ದರು.

ಶಿಕ್ಷಣದ ಜತೆಗೆ ವಿದ್ಯಾರ್ಥಿಗಳಲ್ಲಿ ಕೌಶಲ ಮತ್ತು ಹೊಸ ಆವಿಷ್ಕಾರ ಅಳವಡಿಸಲು ಆಡಳಿತ ಮಂಡಳಿ ಶ್ರೀ ಸೋದೆ ವಾದಿರಾಜ ಫೌಂಡೇಶನ್ ಎಂಬ ಸೆಕ್ಷನ್ 8 ಕಂಪೆನಿಯನ್ನು ಹುಟ್ಟು ಹಾಕಿದೆ. ಅದರ ಮೂಲಕ ಮಧ್ವ ಇನ್‌ಕ್ಯುಬೇಟರ್ ಫಾರ್ ಟೆಕ್ನಾಲಜಿ, ಇನ್ನೋವೇಶನ್ ಮತ್ತು ಎಂಟ್ರಪ್ರೆನ್ಯೂರ್ ಶಿಪ್ ಎಂಬ ಇನ್‌ಕ್ಯುಬೇಶನ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. - ರತ್ನಕುಮಾರ್, ಆಡಳಿತ ಮಂಡಳಿ ಕಾರ್ಯದರ್ಶಿ https://www.vijayavani.net/the-art-of-yakshagana-that-instills-religious-consciousness-in-children https://www.vijayavani.net/may-girls-follow-the-example-of-mother-mary

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net