More

    ಶೈಕ್ಷಣಿಕ ಪ್ರಗತಿಗೆ ಎಸ್ಸೆಸ್ಸೆಲ್ಸಿ ಬುನಾದಿ

    ಚಿತ್ರದುರ್ಗ: ಶೈಕ್ಷಣಿಕ ಬೆಳವಣಿಗೆ ಹಂತದ ಪ್ರಮುಖ ಘಟ್ಟವಾದ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸುವಂತೆ ಡಿಡಿಪಿಐ ಕೆ.ರವಿಶಂಕರರೆಡ್ಡಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

    ಶಿಕ್ಷಣ ಇಲಾಖೆ ಹಾಗೂ ಸಿ.ವಿ. ರಾಮನ್ ಪ್ರೌಢಶಾಲಾ ವಿಜ್ಞಾನ ಶಿಕ್ಷಕರ ಕ್ಲಬ್ ಸಹಯೋಗದಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ತಯಾರಿಸಿದ ಡಿಎನ್‌ಎ ವಿಜ್ಞಾನ ಪಾಸಿಂಗ್ ಪ್ಯಾಕೇಜ್ ಅನ್ನು ಡಿಡಿಪಿಐ ಕಚೇರಿಯಲ್ಲಿ ಸೋಮವಾರ ಬಿಡುಗಡೆಗೊಳಿಸಿ ಮಾತನಾಡಿದರು.

    ವಿದ್ಯಾರ್ಥಿಗಳು ನಿರಾತಂಕವಾಗಿ ಪರೀಕ್ಷೆ ಎದುರಿಸಬೇಕು. ಶಿಕ್ಷಕರು ಮತ್ತು ಮುಖ್ಯಶಿಕ್ಷಕರು ವಿದ್ಯಾರ್ಥಿಗಳಿಗೆ ಪರೀಕ್ಷಾ ಭಯ ಹೋಗಲಾಡಿಸಲು ಅಗತ್ಯ ತರಬೇತಿ ನೀಡಬೇಕು ಎಂದರು.

    ಈ ಪ್ಯಾಕೇಜ್ ಉತ್ತಮ ಫಲಿತಾಂಶಕ್ಕೆ ಸಹಕಾರಿಯಾಗಲಿದೆ. ಮುಂದಿನ 32 ದಿನಗಳು ನಿರ್ಣಾಯಕ. ಸಮಸ್ತ ಶಿಕ್ಷಕರು ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆ ಒಂದನೇ ಸ್ಥಾನ ಪಡೆಯುವಂತೆ ಶ್ರಮಿಸಬೇಕು ಎಂದು ತಿಳಿಸಿದರು.

    ವಿದ್ಯಾಧಿಕಾರಿ ಎನ್.ಆರ್.ತಿಪ್ಪೇಸ್ವಾಮಿ ಮಾತನಾಡಿ, ಅಧ್ಯಯನದಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಶಿಕ್ಷಕರು ದತ್ತು ತೆಗೆದುಕೊಂಡು ಅವರ ಪರೀಕ್ಷಾ ಸಿದ್ಧತೆಯನ್ನು ನಿಯಮಿತವಾಗಿ ಮೇಲ್ವಿಚಾರಣೆ ಮಾಡಬೇಕು. ಮಕ್ಕಳು ಗುಂಪು ಚರ್ಚೆ ನಡೆಸಬೇಕು ಎಂದರು.

    ವಿಜ್ಞಾನ ವಿಷಯ ಪರಿವೀಕ್ಷಕ ಗೋವಿಂದಪ್ಪ, ವಿದ್ಯಾಧಿಕಾರಿ ಮಂಜುನಾಥಸ್ವಾಮಿ, ಗಣಿತ ವಿಷಯ ಪರಿವೀಕ್ಷಕಿ ಸವಿತಾ, ಕನ್ನಡ ವಿಷಯ ಪರಿವೀಕ್ಷಕ ಶಿವಣ್ಣ, ಕ್ಲಬ್ ಅಧ್ಯಕ್ಷ ಡಾ.ಕೆ.ಎನ್.ಮಹೇಶ್, ಕಾರ‌್ಯದರ್ಶಿ ರಾಜಶೇಖರ್, ಖಜಾಂಚಿ ರವಿಕುಮಾರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts