ಪ್ರತಿಭೆ ಅನಾವರಣಕ್ಕೆ ಕ್ರೀಡೆ ಸಹಕಾರಿ

kreede
Published on

ಕೋಟ: ಶೈಕ್ಷಣಿಕ ಬದುಕಿನೊಂದಿಗೆ ವಿವಿಧ ಸ್ತರದ ಚಟುವಟಿಕೆಯಲ್ಲಿ ವಿದ್ಯಾರ್ಥಿ ಸಮೂಹ ಪಾಲ್ಗೊಳ್ಳಬೇಕು. ಆ ಮೂಲಕ ಪ್ರತಿಭೆ ಅನಾವರಣಗೊಳ್ಳಲು ಸಹಕಾರಿಯಾಗಲಿದೆ ಎಂದು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ.ಕುಂದರ್ ಅಭಿಪ್ರಾಯಪಟ್ಟರು.

ಪಡುಕರೆ ಸಂಯುಕ್ತ ಪ್ರೌಢಶಾಲಾ ಮೈದಾನದಲ್ಲಿ ಸೋಮವಾರ ಪದವಿ ಪೂರ್ವ, ಪ್ರೌಢ ಮತ್ತು ಪ್ರಾಥಮಿಕ ಶಾಲೆ ಶೈಕ್ಷಣಿಕ ವರ್ಷದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಕೋಟ ಗ್ರಾಪಂ ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ ಕ್ರೀಡಾ ಧ್ವಜಾರೋಹಣಗೈದರು. ಈಜುಪಟು ದಿಗಂತ್ ಕೋಟ ಕ್ರೀಡಾ ಜ್ಯೋತಿ ಮೈದಾನಕ್ಕೆ ಕರೆತಂದರು. ಉಡುಪಿ ಯುವಜನ ಸೇವೆ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಿತೇಶ್ ಶೆಟ್ಟಿ ಕ್ರೀಡಾಜ್ಯೋತಿ ಬೆಳಗಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ರಾಘವೇಂದ್ರ ಕಾಂಚನ್ ಅಧ್ಯಕ್ಷತೆ ವಹಿಸಿದ್ದರು. ವಾಹಿನಿ ಯುವಕ ಮಂಡಲ ಅಧ್ಯಕ್ಷ ರಮೇಶ್ ಹೆಚ್.ಕುಂದರ್, ಪ್ರಾಥಮಿಕ ವಿಭಾಗ ಮುಖ್ಯ ಶಿಕ್ಷಕ ನಾಗರಾಜ್, ಎಸ್‌ಡಿಎಂಸಿ ನಿಕಟಪೂರ್ವ ಅಧ್ಯಕ್ಷ ಜಯರಾಮ ಶೆಟ್ಟಿ, ಗೀತಾನಂದ ಟ್ರಸ್ಟ್ ವೈಷ್ಣವಿ ರಕ್ಷಿತ್ ಕುಂದರ್ ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯ ಶಿಕ್ಷಕ ವಿವೇಕಾನಂದ ವಿ.ಗಾಂವ್ಕರ್ ಸ್ವಾಗತಿಸಿದರು. ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಡೆನಿಸ್ ಬಾಂಝಿ ಪ್ರಸ್ತಾವನೆ ಸಲ್ಲಿಸಿದರು. ಶಿಕ್ಷಕ ಹೆರಿಯ ಮಾಸ್ಟರ್ ನಿರೂಪಿಸಿದರು. ಮುಖ್ಯ ಶಿಕ್ಷಕ ಮಂಜುನಾಥ್ ಹೊಳ್ಳ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net