ವಿಧಾನಸೌಧದಲ್ಲಿ ಅಕ್ರಮ ಹಣ ಪತ್ತೆ ಪ್ರಕರಣ: ವಿಚಾರಣೆಗೆ ಬರುವಂತೆ ಸಚಿವ ಪುಟ್ಟರಂಗ ಶೆಟ್ಟಿಗೆ ನೋಟಿಸ್​

ಬೆಂಗಳೂರು: ವಿಧಾನಸೌಧದಲ್ಲಿ ಸಚಿವ ಪುಟ್ಟರಂಗ ಶೆಟ್ಟಿ ಅವರ ಕಚೇರಿಯ ಟೈಪಿಸ್ಟ್​ ಮೋಹನ್​ ಎಂಬುವವರ ಬಳಿ ಪತ್ತೆಯಾಗಿದ್ದ 25 ಲಕ್ಷ ರೂಪಾಯಿ ಹಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಚಿವ ಪುಟ್ಟರಂಗ ಶೆಟ್ಟಿ ಅವರಿಗೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ನೋಟಿಸ್​ ನೀಡಿದೆ.

ಬೆಳಗ್ಗೆ 11 ಗಂಟೆಗೆ ಎಸಿಬಿ ಕಚೇರಿಗೆ ಬರುವಂತೆ ನೋಟಿಸ್ ನೀಡಲಾಗಿದ್ದು, ತನಿಖಾಧಿಕಾರಿ ಡಿಎಸ್​ಪಿ ರಾಜೇಂದ್ರ ಅವರ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ. ಇದಕ್ಕೂ ಹಿಂದೆಯೂ ಪುಟ್ಟರಂಗಶೆಟ್ಟಿ ಅವರಿಗೆ ಮೊದಲ ಬಾರಿಗೆ ನೋಟಿಸ್​ ನೀಡಲಾಗಿತ್ತು. ಆದರೆ,ಅನಾರೋಗ್ಯ ನೆಪವೊಡ್ಡಿದ್ದ ಪುಟ್ಟರಂಗಶೆಟ್ಟಿ ಅವರು ವಿಚಾರಣೆಗೆ ಗೈರಾಗಿದ್ದರು.

ಇದೇ ಹಿನ್ನೆಲೆಯಲ್ಲಿ ಈಗ ಮತ್ತೊಮ್ಮೆ ನೋಟಿಸ್​ ನೀಡಲಾಗಿದೆ.