More

    ಲೋಕಾಯುಕ್ತಕ್ಕೆ ಬಲ ನೀಡಲಿದೆ ರಾಜ್ಯ ಸರ್ಕಾರ: ಕೆ.ಎಸ್.ಈಶ್ವರಪ್ಪ

    ಶಿವಮೊಗ್ಗ: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರದ್ದು ಮಾಡಿ ಲೋಕಾಯುಕ್ತ ಮೂಲಕ ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಲಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
    ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಭ್ರಷ್ಟಾಚಾರ ಮುಚ್ಚಿಡಲು ಎಸಿಬಿ ಜಾರಿಗೆ ತಂದಿದ್ದರು. ಆದರೆ ಎಸಿಬಿ ರದ್ದು ಮಾಡಿ ಲೋಕಾಯುಕ್ತಗೆ ಶಕ್ತಿ ತುಂಬಬೇಕು ಎಂದು ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಬಿಜೆಪಿ ಸರ್ಕಾರ ಕೋರ್ಟ್ ಆದೇಶವನ್ನು ಸ್ವಾಗತ ಮಾಡುತ್ತದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಪಕ್ಷ ಅಧಿಕಾರಕ್ಕೆ ಬಂದರೆ 24 ಗಂಟೆಯಲ್ಲೇ ಎಸಿಬಿ ರದ್ದು ಮಾಡುವುದಾಗಿ ಹೇಳಿದ್ದೆವು. ಆದರೆ ಎಸಿಬಿ ರದ್ದುಗೊಳಿಸುವ ವಿಚಾರ ಕೋರ್ಟ್‌ನಲ್ಲಿದ್ದ ಕಾರಣ ಸುಮ್ಮನಾಗಿದ್ದೆವು. ಇದೀಗ ಕೋರ್ಟ್ ತೀರ್ಪು ನೀಡಿದೆ. ಹಾಗಾಗಿ ಎಸಿಬಿ ರದ್ದುಗೊಳಿಸಿ ಲೋಕಾಯುಕ್ತ ಬಲಗೊಳಿಸುವ ಕೆಲಸ ಮಾಡುತ್ತೇವೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts