More

    ಸುಧಾ ವಿರುದ್ಧ ಕ್ರಮಕ್ಕೆ ಸರ್ಕಾರದಿಂದ ಸಿಗಬೇಕಿದೆ ಅನುಮತಿ – ಮತ್ತೊಂದು ಎಫ್​ಐಆರ್​ಗೆ ಎಸಿಬಿ ಸಿದ್ಧತೆ

    ಬೆಂಗಳೂರು : ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪ ಎದುರಿಸುತ್ತಿರುವ ಕೆಎಎಸ್ ಅಧಿಕಾರಿ ಡಾ.ಬಿ. ಸುಧಾ ವಿರುದ್ಧ ಮತ್ತೊಂದು ಎಫ್​ಐಆರ್ ದಾಖಲಿಸಿಕೊಳ್ಳಲು ಅನುಮತಿ ನೀಡುವಂತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಸರ್ಕಾರಕ್ಕೆ ಪತ್ರ ಬರೆದು 2 ವಾರ ಕಳೆದರೂ ಇನ್ನೂ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

    ಸುಧಾ ಅವರು ಬೆಂಗಳೂರು ಅಧಿವೃದ್ಧಿ ಪ್ರಾಧಿಕಾರ (ಬಿಡಿಎ)ದಲ್ಲಿ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿದ್ದ ವೇಳೆ ಅನಧಿಕೃತವಾಗಿ ಕೆಲ ಕೆಲಸಗಳನ್ನು ಮಾಡಿಸಿಕೊಟ್ಟು ಅಧಿಕಾರ ದುರುಪಯೋಗಪಡಿಸಿಕೊಂಡಿರುವುದು ಎಸಿಬಿ ತನಿಖೆಯಲ್ಲಿ ಕಂಡು ಬಂದಿದೆ. ಇದಕ್ಕೆ ಸಂಬಂಧಿಸಿದ ಕೆಲ ಸಾಕ್ಷ್ಯಗಳು ಎಸಿಬಿ ಕೈ ಸೇರಿದೆ. ಹೀಗಾಗಿ ಅವರ ವಿರುದ್ಧ ಮತ್ತೊಂದು ಹೊಸ ಎಫ್​ಐಆರ್ ದಾಖಲಿಸಿಕೊಂಡು ವಿಚಾರಣೆ ನಡೆಸಲು ಎಸಿಬಿ ಸಿದ್ಧತೆ ನಡೆಸಿದೆ. ಈ ಪ್ರಕ್ರೀಯೆಗೆ ಅನುಮತಿ ನೀಡುವಂತೆ ಸರ್ಕಾರಕ್ಕೆ ಎಸಿಬಿ ಅಧಿಕಾರಿಗಳು ಕಳೆದ ಎರಡು ವಾರಗಳ ಹಿಂದೆ ಪತ್ರ ಬರೆದಿದ್ದಾರೆ. ಆದರೆ, ಸರ್ಕಾರದಿಂದ ಇದುವರೆಗೆ ಯಾವುದೇ ಪ್ರತಿಕ್ರೀಯೆ ಬಂದಿಲ್ಲ. ಸರ್ಕಾರದಿಂದ ಅನುಮತಿ ಸಿಕ್ಕಿದ ಕೂಡಲೇ ಸುಧಾ ವಿರುದ್ಧ ಮತ್ತೊಂದು ಎಫ್​ಐಆರ್ ದಾಖಲಿಸಿ ಅವರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲು ಎಸಿಬಿ ಅಧಿಕಾರಿಗಳು ಮುಂದಾಗಿದ್ದಾರೆ.

    ಇದನ್ನೂ ಓದಿ:  ಮದುವೆ ದಿನವೇ ಮುಟ್ಟಾಗಿದ್ದಳಾಕೆ : ಡಿವೋರ್ಸ್​ಗೆ ಅದುವೇ ಕಾರಣವಾಯ್ತಾ?

    ಈಗಾಗಲೇ ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಬಗ್ಗೆ ಎಸಿಬಿಯಲ್ಲಿ ಸುಧಾ ವಿರುದ್ಧ 1 ಎಫ್​ಐಆರ್ ದಾಖಲಾಗಿದ್ದು, ಈ ಪ್ರಕರಣದಲ್ಲಿ ಜಾಮೀನು ಪಡೆದಿದ್ದಾರೆ. ಹೀಗಾಗಿ ಅವರನ್ನು ಬಂಧಿಸಿ ವಿಚಾರಣೆ ನಡೆಸಲು ಸಾಧ್ಯವಾಗುತ್ತಿಲ್ಲ.

    ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮ ಫೇಸ್​ಬುಕ್​ ಪುಟ ಲೈಕ್ ಮಾಡಿ ಮತ್ತು ಫಾಲೋ ಮಾಡಿ..

    ಮೋದಿ ಕೇಶದ ಹಿಂದೆ ರಾಮ ಮಂದಿರ ದೀಕ್ಷೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts