More

    ಮಂಗಳೂರು, ಉಡುಪಿಯಲ್ಲಿ ಎಸಿಬಿ ಕಾರ್ಯಾಚರಣೆ, ಇಬ್ಬರು ಅಧಿಕಾರಿಗಳ ಮನೆ, ಕಚೇರಿಗಳಿಗೆ ದಾಳಿ

    ಮಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಬ್ಬರು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಗುರುವಾರ ಬೆಳಗ್ಗೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

    ದ.ಕ. ಜಿಲ್ಲಾಧಿಕಾರಿ ಸಂಕೀರ್ಣದಲ್ಲಿರುವ ನಗರಾಭಿವೃದ್ಧಿ ಘಟಕದ ಎಕ್ಸಿಕ್ಯೂಟಿವ್ ಇಂಜಿನಿಯರ್ ಜಿ.ಶ್ರೀಧರ್ ಮಂಗಳೂರಿನ ಮನೆಗೆ ಎಸಿಬಿ ಪಶ್ಚಿಮ ವಲಯ ಎಸ್ಪಿ ಮಂಜುನಾಥ ಕವರಿ ನೇತೃತ್ವದಲ್ಲಿ ದಾಳಿ ನಡೆಸಿರುವ ಅಧಿಕಾರಿಗಳು ಕೋಟ್ಯಂತರ ರೂ. ಮೌಲ್ಯದ ಆಸ್ತಿ ಪತ್ತೆ ಮಾಡಿದ್ದಾರೆ. ನಗರದ ಡಾನ್‌ಬಾಸ್ಕೊ ಬಳಿಯ ಅಪಾರ್ಟ್‌ಮೆಂಟ್‌ನ ಎಂಟನೇ ಮಹಡಿಯಲ್ಲಿರುವ ಶ್ರೀಧರ್ ಅವರ ನಿವಾಸ, ಜಿಲ್ಲಾಧಿಕಾರಿ ಸಂಕೀರ್ಣದಲ್ಲಿರುವ ಕಚೇರಿ ಹಾಗೂ ಮೈಸೂರಿನಲ್ಲಿನಲ್ಲಿರುವ ಮನೆಗೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

    ಮೈಸೂರು ನಗರದ ದಟ್ಟಹಳ್ಳಿಯಲ್ಲಿ 1 ವಾಸದ ಮನೆ, ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ತಾಲೂಕಿನಲ್ಲಿ ವಾಸದ ಮನೆ, ವಿವಿಧ ನಗರಗಳಲ್ಲಿ ಒಟ್ಟು 4 ನಿವೇಶನಗಳು, ಬ್ಯಾಂಕ್ ಉಳಿತಾಯ ಹಾಗೂ ಡೆಪಾಸಿಟ್‌ಗಳು, ಚಿನ್ನ ಮತ್ತು ಬೆಳ್ಳಿ ಆಭರಣಗಳು, ನಗದು, ಬೆಲೆ ಬಾಳುವ ಗೃಹೋಪಯೋಗಿ ವಸ್ತುಗಳು ಪತ್ತೆಯಾಗಿವೆ. ಶ್ರೀಧರ್ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಎಸಿಬಿ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts