ಯಾವುದೇ ಷರತ್ತುಗಳಿಲ್ಲ, ನಾನು ಕಣಿವೆ ರಾಜ್ಯಕ್ಕೆ ಯಾವಾಗ ಬರಲಿ: ರಾಹುಲ್​ ಗಾಂಧಿ

Latest News

ಬೆಂಗಳೂರಿಗೆ ಇನ್ನೊಂದು ರೈಲು

ಶ್ರವಣ್‌ಕುಮಾರ್ ನಾಳ ಪುತ್ತೂರು ಅಗತ್ಯವಿರುವ 2ಪ್ರದೇಶಗಳಿಗೆ ಅಥವಾ ಬೃಹತ್ ನಗರದಿಂದ ಸಣ್ಣ ಪಟ್ಟಣಗಳಿಗೆ ವೇಗವಾಗಿ ಸಂಪರ್ಕಿಸಲು ನೆರವಾಗುವ ಉದ್ದೇಶದಿಂದ ತುಮಕೂರು-ಯಶವಂತಪುರ ಸೇರಿ ದೇಶದಲ್ಲಿ 10 ಸೇವಾ ಸರ್ವೀಸ್...

ಕ್ರಿಕೆಟಲ್ಲೂ ಹನಿಟ್ರ್ಯಾಪ್!

ಬೆಂಗಳೂರು: ‘ಸಭ್ಯರ ಕ್ರೀಡೆ’ ಕ್ರಿಕೆಟ್​ಗೆ ಬೆಟ್ಟಿಂಗ್ ದಂಧೆಯ ಕಳಂಕ ಮೆತ್ತಿದ ಕರ್ನಾಟಕ ಪ್ರೀಮಿಯರ್ ಲೀಗ್(ಕೆಪಿಎಲ್) ಹಿಂದೆ ಹನಿಟ್ರಾ್ಯಪ್ ಅಪಸವ್ಯವೂ ಕಾಣಿಸಿಕೊಂಡಿದೆ. ಮ್ಯಾಚ್ ಫಿಕ್ಸಿಂಗ್​ನಲ್ಲಿ ಸಿಕ್ಕಿಬಿದ್ದ ಆಟಗಾರರನ್ನು...

ಜೋಡಿ ಕೊಲೆ ಆರೋಪಿ ಸೆರೆ

ಈಶ್ವರಮಂಗಲ: ಪುತ್ತೂರು ತಾಲೂಕಿನ ಕುರಿಯ ಗ್ರಾಮದ ಅಜಲಾಡಿ ಸಮೀಪದ ಹೊಸಮಾರು ಎಂಬಲ್ಲಿ ಭಾನುವಾರ ರಾತ್ರಿ ನಡೆದಿದ್ದ ಜೋಡಿ ಕೊಲೆ ಪ್ರಕರಣದ ಆರೋಪಿಯನ್ನು ಗ್ರಾಮಾಂತರ ಠಾಣಾ ಇನ್ಸ್‌ಪೆಕ್ಟರ್...

ಕೆಪಿಎಸ್​ಸಿ ​ಸಂದರ್ಶನದ ವೇಳೆ ನಡೆಯುವ ಅವ್ಯವಹಾರ ತಪ್ಪಿಸಲು ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಣಯ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್​ಸಿ) ಸಂದರ್ಶನ ವೇಳೆ ಆಗಬಹುದಾದ ಅವ್ಯವಹಾರ ನಿಯಂತ್ರಿಸಿ ನೇಮಕಾತಿಯಲ್ಲಿ ಬಿಗಿ ತರುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಬುಧವಾರ...

ಖಂಡಿಗೆ ಕಿಂಡಿ ಅಣೆಕಟ್ಟು ದುರಸ್ತಿಗಿಲ್ಲ ಕ್ರಮ

ಲೋಕೇಶ್ ಸುರತ್ಕಲ್ ಪಾವಂಜೆ ಖಂಡಿಗೆ ಬಳಿ ಇರುವ ನಂದಿನಿ ನದಿ ಕಿಂಡಿ ಅಣೆಕಟ್ಟಿನ ದುರಸ್ತಿಗೆ ಅಧಿಕಾರಿಗಳು ಖಚಿತ ಯೋಜನೆ ರೂಪಿಸಿಲ್ಲ. ಅಣೆಕಟ್ಟು ನಿರ್ವಹಣೆಗೆ ಸಮಿತಿಯೇ ರಚನೆಯಾಗಿಲ್ಲ. ಹಾಗಾಗಿ...

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷಾಧಿಕಾರ ರದ್ದುಗೊಳಿಸಿ ಕಣಿವೆ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಿದ ನಂತರ ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಲು ನಾನು ಯಾವಾಗ ಬರಲಿ ಎಂದು ರಾಹುಲ್​ ಗಾಂಧಿ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಸತ್ಯಪಾಲ್​ ಮಲಿಕ್​ ಅವರಿಗೆ ಮತ್ತೊಮ್ಮೆ ಪ್ರಶ್ನಿಸಿದ್ದಾರೆ.

ಇಂದು ಈ ಕುರಿತು ಟ್ವೀಟ್​ ಮಾಡಿರುವ ರಾಹುಲ್​ ಗಾಂಧಿ, ಆತ್ಮೀಯ ಮಲಿಕ್​ ಜೀ, ನನ್ನ ಟ್ವೀಟ್​ಗೆ ನೀವು ನೀಡಿದ ಉತ್ತರ ನೋಡಿದೆ. ನಾನು ನಿಮ್ಮ ಆಹ್ವಾನವನ್ನು ಒಪ್ಪಿದ್ದೇನೆ. ಯಾವುದೇ ಷರತ್ತುಗಳಿಲ್ಲದೆ ಕಣಿವೆ ರಾಜ್ಯಕ್ಕೆ ಭೇಟಿ ನೀಡಲು ನಾನು ಸಿದ್ಧನಿದ್ದೇನೆ. ಯಾವಾಗ ಬರಬೇಕು ಎಂಬುದನ್ನು ತಿಳಿಸಿ ಎಂದು ಪ್ರಶ್ನಿಸಿದ್ದಾರೆ.

370ನೇ ವಿಧಿ ರದ್ದುಗೊಂಡ ನಂತರ ಕಣಿವೆ ರಾಜ್ಯದಲ್ಲಿ ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದೆ ಎಂದು ರಾಹುಲ್​ ಗಾಂಧಿ ಟೀಕೆ ಮಾಡಿದ್ದರು. ಇದಕ್ಕೆ ಉತ್ತರಿಸಿದ್ದ ಮಲಿಕ್​, ಕಾಶ್ಮೀರದ ಪರಿಸ್ಥಿತಿಯನ್ನು ಅವಲೋಕಿಸಲು ರಾಹುಲ್​ ಗಾಂಧಿ ಅವರನ್ನು ಕಣಿವೆ ರಾಜ್ಯಕ್ಕೆ ಆಹ್ವಾನಿಸುತ್ತೇನೆ. ಅವರಿಗಾಗಿ ವಿಶೇಷ ವಿಮಾನ ಕಳುಹಿಸಿಕೊಡುತ್ತೇನೆ ಎಂದು ತಿಳಿಸಿದ್ದರು.

ಇದಕ್ಕೆ ನಿನ್ನೆ ಪ್ರತಿಕ್ರಿಯೆ ನೀಡಿದ್ದ ರಾಹುಲ್​ ಗಾಂಧಿ, ನಿಮ್ಮ ಆಹ್ವಾನದಂತೆ ವಿಪಕ್ಷಗಳ ನಾಯಕರ ನಿಯೋಗದೊಂದಿಗೆ ನಾನು ಆಗಮಿಸುತ್ತೇನೆ. ನಮಗೆ ಯಾವುದೇ ವಿಶೇಷ ವಿಮಾನದ ಅಗತ್ಯವಿಲ್ಲ. ಆದರೆ, ನಾವು ಕಣಿವೆ ರಾಜ್ಯದಲ್ಲಿ ಜನರು, ಮುಖ್ಯವಾಹಿನಿ ನಾಯಕರು ಮತ್ತು ಅಲ್ಲಿ ನಿಯೋಜಿತರಾಗಿರುವ ಸೈನಿಕರನ್ನು ಭೇಟಿ ಮಾಡಲು ಮತ್ತು ನಮಗೆ ನಮಗೆ ಬೇಕಾದ ಸ್ಥಳಗಳಿಗೆ ತೆರಳಲು ಸ್ವಾತಂತ್ರ್ಯ ನೀಡಬೇಕು ಎಂದು ತಿಳಿಸಿದ್ದರು.

ಮಂಗಳವಾರ ರಾಹುಲ್​ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದ ಮಲಿಕ್​, ನೀವು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲು ಷರತ್ತುಗಳನ್ನು ವಿಧಿಸುತ್ತಿದ್ದೀರಿ. ವಿಪಕ್ಷಗಳ ನಾಯಕರ ನಿಯೋಗವನ್ನು ಕರೆತರುವ ಮೂಲಕ ಕಣಿವೆ ರಾಜ್ಯದಲ್ಲಿ ಅಶಾಂತಿ ಉಂಟುಮಾಡಲು ರಾಹುಲ್​ ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿಸಿದ್ದರು.

ಇಂದು ಪುನಃ ಟ್ವೀಟ್​ ಮಾಡುವ ಮೂಲಕ ಮಲಿಕ್​ ಅವರ ಆಹ್ವಾನ ಒಪ್ಪಿಕೊಂಡಿದ್ದು ಕಣಿವೆ ರಾಜ್ಯಕ್ಕೆ ಯಾವಾಗ ಬರಬೇಕು ಎಂದು ಪ್ರಶ್ನಿಸಿದ್ದಾರೆ. (ಏಜೆನ್ಸೀಸ್​)

ನಮಗೆ ವಿಮಾನದ ವ್ಯವಸ್ಥೆ ಬೇಡ, ಕಣಿವೆಯಲ್ಲಿ ಸ್ವತಂತ್ರವಾಗಿ ಓಡಾಡಲು ಅವಕಾಶ ಕೊಟ್ಟರೆ ಸಾಕು: ರಾಹುಲ್​ ಗಾಂಧಿ

- Advertisement -

Stay connected

278,638FansLike
573FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...