More

    ಜು.15ರಂದು ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

    ವಿಜಯಪುರ: ಕರ್ನಾಟಕ ಲೋಕಾಯುಕ್ತ ಪೋಲಿಸ್ ಅಧಿಕಾರಿಗಳು ಜಿಲ್ಲೆಯ ಸಿಂದಗಿ ತಾಪಂ ಸಭಾ ಭವನದಲ್ಲಿ ಜು.15 ರಂದು ಬೆಳಗ್ಗೆ 10.30ಕ್ಕೆ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ.

    ಸಿಂದಗಿ ತಾಲೂಕು ಕೇಂದ್ರದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿಯಲ್ಲಿ ಸಾರ್ವಜನಿಕರಿಂದ ಭರ್ತಿ ಮಾಡಿದ ಮತ್ತು ನೋಟರಿನಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಅಂದು ನಡೆಯುವ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಪೋಲಿಸ್ ಅಧೀಕ್ಷಕರು (ಮೊ.9364062528), ಪೋಲಿಸ್ ಉಪಾಧೀಕ್ಷಕರು (ಮೊ.9364062557), ಪೊಲೀಸ್ ಇನ್ಸ್‌ಪೆಕ್ಟರ್-1 (ಮೊ.9364062640), ಪೊಲೀಸ್ ಇನ್ಸಪೆಕ್ಟರ್-2 (ಮೊ.9364062639) ಭಾಗವಹಿಸಲಿದ್ದಾರೆ.

    ಸರ್ಕಾರಿ ಕಚೇರಿಗಳಲ್ಲಿ ಅಧಿಕೃತವಾಗಿ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ಹಾಗೂ ಲಂಚದ ಬೇಡಿಕೆ, ಇನ್ನಿತರೆ ತೊಂದರೆ ನೀಡುತ್ತಿರುವ ಅಧಿಕಾರಿ-ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದ್ದು, ಸ್ಥಳದಲ್ಲಿ ಪರಿಹಾರ ಕಂಡುಕೊಳ್ಳಬಹುದಾದ ದೂರುಗಳನ್ನು ಅಲ್ಲಿನ ಸ್ಥಳೀಯ ಅಧಿಕಾರಿಗಳ ಸಹಕಾರದೊಂದಿಗೆ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುವುದು.

    ಸರ್ಕಾರಿ ಅಧಿಕಾರಿಗಳು ಅಕ್ರಮ ಆಸ್ತಿ ಸಂಪಾದನೆ, ಸರ್ಕಾರಿ ಹಣದ ದುರುಪಯೋಗ, ಕಳಪೆ ಕಾಮಗಾರಿ ಹಾಗೂ ಇತರೆ ಯಾವುದೇ ರೀತಿಯ ಭ್ರಷ್ಟಾಚಾರದ ದೂರುಗಳಿದ್ದಲ್ಲಿ, ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.08352-255333, 257786, 295074 ಕ್ಕೆ ಸಂಪರ್ಕಿಸುವಂತೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts