ಕಾರಿಗೆ ಲಾರಿ ಡಿಕ್ಕಿಯಾಗಿ ಹೆದ್ದಾರಿ ಸಂಚಾರ ಅಸ್ತವ್ಯಸ್ತ

accident
Published on

ಮೂಲ್ಕಿ: ರಾಷ್ಟ್ರೀಯ ಹೆದ್ದಾರಿ 66 ಮೂಲ್ಕಿ ಬಸ್ ನಿಲ್ದಾಣದ ಬಳಿ ಕಾರಿಗೆ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದವರು ಪವಾಡ ಸದೃಶವಾಗಿ ಪಾರಾಗಿದ್ದಾರೆ.

ಕೇರಳದ ತ್ರಿಶೂರ್ ಕಡೆಯಿಂದ ಕೊಲ್ಲೂರು ಕಡೆಗೆ ಹೋಗುತ್ತಿದ್ದ ಕಾರು ಚಾಲಕನ ನಿರ್ಲಕ್ಷೃ ಚಾಲನೆಯಿಂದ ಮೂಲ್ಕಿ ಬಸ್ ನಿಲ್ದಾಣದ ಬಳಿ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದ ಕೆಲ ಹೊತ್ತು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿತು.

ಕೂಡಲೇ ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಎರಡು ವಾಹನಗಳನ್ನು ಸ್ಥಳದಿಂದ ತೆರವುಗೊಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಮೂಲ್ಕಿ ಜಂಕ್ಷನ್ ತೀರಾ ಅಪಾಯಕಾರಿಯಾಗಿ ಪರಿಣಮಿಸಿದ್ದು, ಹೆದ್ದಾರಿಯಲ್ಲಿ ವೇಗ ತಡೆಗೆ ಇರಿಸಿದ ಬ್ಯಾರಿಕೇಡ್ ಓವರ್ ಟೆಕ್ ವಾಡುವ ರಭಸದಲ್ಲಿ ವಾಹನಗಳ ನಡುವೆ ನಿರಂತರ ಅಪಘಾತಗಳು ನಡೆಯುತ್ತಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net