ಕಾರು-ಟಾಟಾ ಏಸ್ ಡಿಕ್ಕಿ, ಪ್ರಯಾಣಿಕರು ಪಾರು

Published on

ಸುಳ್ಯ: ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲುಗುಂಡಿ, ಬಂಗ್ಲೆಗುಡ್ಡೆ ಬಳಿ ಕಾರು ಮತ್ತು ಟಾಟಾ ಏಸ್ ನಡುವೆ ಭಾನುವಾರ ಅಪಘಾತ ಸಂಭವಿಸಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಸುಳ್ಯ ಕಡೆಗೆ ಬರುತ್ತಿದ್ದ ಟಾಟಾ ಏಸ್ ವಾಹನ ಹಾಗೂ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಾರು ಮಧ್ಯೆ ಅಪಘಾತ ಉಂಟಾಗಿದೆ. ಅಪಘಾತದಲ್ಲಿ ಎರಡೂ ವಾಹನಗಳು ಜಖಂ ಆಗಿದೆ. ಅಪಘಾತದ ರಭಸಕ್ಕೆ ಟಾಟಾ ಏಸ್ ವಾಹನ ಪಲ್ಟಿಯಾಗಿ ಬಿದ್ದಿದೆ. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಹೊತ್ತು ವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net