ಪುತ್ತೂರು: ಮಾಣಿ-ಮೈಸೂರು ಹೆದ್ದಾರಿಯ ತೆಂಕಿಲದಲ್ಲಿ ಕಾರೊಂದು ಬುಧವಾರ ಮಧ್ಯರಾತ್ರಿ ಉರುಳಿ ಬಿದ್ದು, ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ.
ಮಂಗಳೂರಿನ ಪಿಜಿಯಲ್ಲಿ ವಾಸವಾಗಿರುವ ಬೆಳಾರಾಣಿ(೪೯) ಮತ್ತು ಅವರ ಪುತ್ರಿ ಅಕ್ಷಾ ಎಲ್.ಪಟೇಲ್ ಗಾಯಗೊಂಡಿದ್ದಾರೆ. ಸಕಲೇಶಪುರದಲ್ಲಿ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಬೆಂಗಳೂರಿಗೆ ಹೋಗಿ ಅಲ್ಲಿಂದ ಮೈಸೂರು ಮಾರ್ಗವಾಗಿ ಮಂಗಳೂರಿನತ್ತ ತೆರಳುತ್ತಿದ್ದರು. ನಿಯಂತ್ರಣ ಕಳೆದುಕೊಂಡ ಕಾರು ಹೆದ್ದಾರಿ ಪಕ್ಕದ ಅಲ್ಯುಮಿನಿಯಂ ತಡೆಬೇಲಿಗೆ ಡಿಕ್ಕಿಯಾಗಿ ಮಗುಚಿ ಬಿದ್ದಿದೆ. ಪುತ್ತೂರು ಟ್ರಾಫಿಕ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.