

ಕಡಬ: ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೇರಡ್ಕ ಸಮೀಪ ಶುಕ್ರವಾರ ನಿಯಂತ್ರಣ ತಪ್ಪಿದ ಬೈಕ್ ಮೋರಿಗೆ ಡಿಕ್ಕಿ ಹೊಡೆದ ಪರಿಣಾಮ ಶಾಲಾ ವಿದ್ಯಾರ್ಥಿ ಮೃತಪಟ್ಟಿದ್ದಾನೆ.
ಪೇರಡ್ಕದ ಖಾಸಗಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ, ನೂಜಿಬಾಳ್ತಿಲ ಗ್ರಾಮದ ಹೊಸಮನೆ ಕಾನ ನಿವಾಸಿ ವಿಶ್ವನಾಥ್ ಎಂಬುವವರ ಪುತ್ರ ಆಶಿಶ್(16) ಮೃತ ವಿದ್ಯಾರ್ಥಿ. ಮನೆಯಿಂದ ಬೈಕ್ನಲ್ಲಿ ಶಾಲೆಗೆ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದ್ದು, ಬಾಲಕನನ್ನು ಕಡಬದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಗಂಭೀರ ಗಾಯಗೊಂಡಿದ್ದ ಆತ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತ ಪಟ್ಟಿರುವುದಾಗಿ ತಿಳಿದುಬಂದಿದೆ. ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ. ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪ್ರಾಪ್ತರ ವಾಹನ ಚಾಲನೆ ಕಂಡುಬಂದರೆ ಕ್ರಮ ಕೈಗೊಳ್ಳಲು ಕಡಬ, ಸುಬ್ರಹ್ಮಣ್ಯ, ಬೆಳ್ಳಾರೆ, ಉಪ್ಪಿನಂಗಡಿ ಠಾಣಾಧಿಕಾರಿಗಳಿಗೆ ಕಡಬ ತಹಸೀಲ್ದಾರ ಪ್ರಭಾಕರ ಖಜೂರೆ ಆದೇಶ ನೀಡಿದ್ದಾರೆ.