ಆಟೋ ಡಿಕ್ಕಿಯಾಗಿ ಪಾದಚಾರಿ ಮೃತ್ಯು

PTR_1 AUG_8
Published on

ಪುತ್ತೂರು: ಕೌಡಿಚ್ಚಾರ್-ಮೈಂದನಡ್ಕ ರಸ್ತೆಯ ಪಾಪೆಮಜಲು ಎಂಬಲ್ಲಿ ಆಟೋದಿಂದ ಇಳಿದು ರಸ್ತೆ ದಾಟುತ್ತಿದ್ದ ಸಂದರ್ಭ ಇನ್ನೊಂದು ಆಟೋ ಡಿಕ್ಕಿಯಾಗಿ ಪಾಪೆಮಜಲು ನಿವಾಸಿ ಸುಭಾಷ್ ಕುಲಾಲ್(೫೫) ಎಂಬುವರು ಮೃತಪಟ್ಟಿದ್ದಾರೆ. ಕೌಡಿಚ್ಚಾರ್‌ನಲ್ಲಿ ಹೋಟೆಲ್ ಬಂದ್ ಮಾಡಿ ಆಟೋದಲ್ಲಿ ಮನೆಗೆ ತೆರಳಿದ ಅವರು ರಸ್ತೆ ದಾಟುತ್ತಿದ್ದ ಸಂದರ್ಭ ಇನ್ನೊಂದು ಆಟೋ ಡಿಕ್ಕಿ ಹೊಡೆದಿದೆ. ಇದರ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net