ಬೆಂಗಳೂರು-ಮೈಸೂರು ದಶಪಥದಲ್ಲಿ ಮತ್ತೊಂದು ಭೀಕರ ಅಪಘಾತ; ಇಬ್ಬರ ಸಾವು, ನಾಲ್ವರಿಗೆ ಗಾಯ

Accident F (1)
Published on

ರಾಮನಗರ: ಬೆಂಗಳೂರು-ಮೈಸೂರು ದಶಪಥದಲ್ಲಿ ಮೇಲಿಂದ ಮೇಲೆ ಅಪಘಾತಗಳಾಗುತ್ತಿದ್ದು, ಇಂದು ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಪರಿಣಾಮವಾಗಿ ಇಬ್ಬರು ಸಾವಿಗೀಡಾಗಿದ್ದರೆ, ನಾಲ್ವರು ಗಾಯಗೊಂಡಿದ್ದಾರೆ.

ಚನ್ನಪಟ್ಟಣದ ದೇವರಹೊಸಳ್ಳಿ ಗ್ರಾಮದ ಬಳಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಯುವತಿ ಸೇರಿದಂತೆ ಒಂದೇ ಕುಟುಂಬದ ಇಬ್ಬರು ಮೃತಪಟ್ಟಿದ್ದಾರೆ. ನಾಲ್ವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರು ಮೈಸೂರಿನಿಂದ ಬೆಂಗಳೂರು ಕಡೆಗೆ ಸಾಗುತ್ತಿತ್ತು. ಲಾರಿಯನ್ನು ಓವರ್​ಟೇಕ್ ಮಾಡಲು ಯತ್ನಿಸುತ್ತಿದ್ದಾಗ ಅದರ ಹಿಂಬದಿಗೆ ಕಾರು ಡಿಕ್ಕಿಯಾಗಿದೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net