More

    ಬೆಳಗಾವಿಯಲ್ಲಿ ರಸ್ತೆ ಆಫಘಾತ ಪುತ್ತೂರಿನ ಕಾಂಗ್ರೆಸ್ ಮುಖಂಡ ಮೃತ್ಯು


    ಮಂಗಳೂರು: ಕಾಂಗ್ರೆಸ್ ಕಾರ್ಮಿಕ ಘಟಕದ ಹಾಗೂ ತಮಿಳು ಕಾರ್ಮಿಕ ಸಂಘಟನೆಯ ಮುಖಂಡರಾದ ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕೌಡಿಚ್ಚಾರ್ ನಿವಾಸಿ ಶಿವಕುಮಾರ್(50) ಅವರು ಬೆಳಗಾವಿಯ ಖಾನಾಪುರದಲ್ಲಿ ಶುಕ್ರವಾರ ಬೆಳಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.


    ಶಿವಕುಮಾರ್ ಅವರು ಉದ್ಯೋಗದ ನಿಮಿತ್ತ ಬೆಳಗಾವಿಯ ಖಾನಾಪುರಕ್ಕೆ ಹೋಗಿದ್ದು ಅಲ್ಲಿ ಅವರು ಶುಕ್ರವಾರ ಬೆಳಗ್ಗೆ ಚಲಾಯಿಸಿಕೊಂಡು ಹೋಗುತಿದ್ದ ಬೈಕ್ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಶಿವಕುಮಾರ್ ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷರಾಗಿ ಈ ಹಿಂದೆ ಕಾರ್ಯ ನಿರ್ವಹಿಸಿದ್ದರು.


    ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts