More

  ಬೆಂಗಳೂರು-ಮೈಸೂರು ದಶಪಥದಲ್ಲಿ ಆರು ಕಾರುಗಳು ಮಧ್ಯೆ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ

  ರಾಮನಗರ: ಬೆಂಗಳೂರು-ಮೈಸೂರು ದಶಪಥದಲ್ಲಿ ಆರು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಮೂಲಕ ಎಕ್ಸ್​​ಪ್ರೆಸ್​ ವೇ ಇನ್ನೊಂದು ಭೀಕರ ಅಪಘಾತಕ್ಕೆ ಸಾಕ್ಷಿಯಾಗಿದೆ.

  ಬೆಂಗಳೂರು-ಮೈಸೂರು ದಶಪಥದಲ್ಲಿ ಚನ್ನಪಟ್ಟಣ ತಾಲೂಕಿನ ದೇವರಹೊಸಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ತುಂತುರು ಮಳೆ ಹಿನ್ನೆಲೆಯಲ್ಲಿ ಈ ವಾಹನಗಳು ನಿಯಂತ್ರಣ ತಪ್ಪಿ ಡಿಕ್ಕಿಯಾಗಿವೆ. ಆರು ಕಾರುಗಳು ಹಿಂಬದಿಯಿಂದ ಒಂದಕ್ಕೊಂದು ಡಿಕ್ಕಿಯಾಗಿ, ಈ ಭೀಕರ ಅಪಘಾತ ಸಂಭವಿಸಿದೆ.

  ಅಪಘಾತಕ್ಕೀಡಾದ ಕಾರುಗಳೆಲ್ಲವೂ ಬೆಂಗಳೂರಿನಿಂದ ಮೈಸೂರು ಕಡೆಗೆ ಸಾಗುತ್ತಿದ್ದವು. ಈ ಪ್ರಕರಣದಲ್ಲಿ ಸ್ಯಾಂಟ್ರೋ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಹಾಸನ ಮೂಲದ ರೇಣುಕಮ್ಮ, ಮಂಜುಳಾ, ಸುಧೀರ್ ಮೃತಪಟ್ಟವರು. ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  ಬಿಬಿಎಂಪಿ ವಾರ್ಡ್ ಮರುವಿಂಗಡಣೆ: ಅಂತಿಮ ಅಧಿಸೂಚನೆ ಪ್ರಕಟ; 13 ವಾರ್ಡ್​ಗಳ ಹೆಸರು ಬದಲಾವಣೆ

  ನಾಳೆ ಇಡೀ ಬೆಂಗಳೂರು ಬಂದ್ ಆಗ್ಬೇಕು; ಅದಾಗ್ಯೂ ವ್ಯಾಪಾರ ಮಾಡಿದ್ರೆ ಮುಂದಾಗುವ ತೊಂದರೆಗೆ ನೀವೇ ಹೊಣೆ: ಬಿಎಸ್​ವೈ

  ರಾಜ್ಯೋತ್ಸವ ರಸಪ್ರಶ್ನೆ - 21

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts