ಬೆಂಗಳೂರು-ಮೈಸೂರು ದಶಪಥದಲ್ಲಿ ಆರು ಕಾರುಗಳು ಮಧ್ಯೆ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ

ರಾಮನಗರ: ಬೆಂಗಳೂರು-ಮೈಸೂರು ದಶಪಥದಲ್ಲಿ ಆರು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಮೂಲಕ ಎಕ್ಸ್​​ಪ್ರೆಸ್​ ವೇ ಇನ್ನೊಂದು ಭೀಕರ ಅಪಘಾತಕ್ಕೆ ಸಾಕ್ಷಿಯಾಗಿದೆ. ಬೆಂಗಳೂರು-ಮೈಸೂರು ದಶಪಥದಲ್ಲಿ ಚನ್ನಪಟ್ಟಣ ತಾಲೂಕಿನ ದೇವರಹೊಸಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ತುಂತುರು ಮಳೆ ಹಿನ್ನೆಲೆಯಲ್ಲಿ ಈ ವಾಹನಗಳು ನಿಯಂತ್ರಣ ತಪ್ಪಿ ಡಿಕ್ಕಿಯಾಗಿವೆ. ಆರು ಕಾರುಗಳು ಹಿಂಬದಿಯಿಂದ ಒಂದಕ್ಕೊಂದು ಡಿಕ್ಕಿಯಾಗಿ, ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತಕ್ಕೀಡಾದ ಕಾರುಗಳೆಲ್ಲವೂ ಬೆಂಗಳೂರಿನಿಂದ ಮೈಸೂರು ಕಡೆಗೆ ಸಾಗುತ್ತಿದ್ದವು. … Continue reading ಬೆಂಗಳೂರು-ಮೈಸೂರು ದಶಪಥದಲ್ಲಿ ಆರು ಕಾರುಗಳು ಮಧ್ಯೆ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ