

ಮಂಗಳೂರು: ನಗರದ ಹೊರವಲಯದ ತೊಕ್ಕೊಟ್ಟು ಫ್ಲೈ ಓವರ್ನಲ್ಲಿ ಗುರುವಾರ ಭೀಕರ ಅಪಘಾತ ಸಂಭವಿಸಿದೆ. ಫ್ಲೈಓವರ್ನ ಡಿವೈಡರ್ನಿಂದ ಹಾರಿದ ಕಾರು, ಸ್ಕೂಟಿಗೆ ಡಿಕ್ಕಿಯಾಗಿದ್ದು, ಸ್ಕೂಟಿಯಲ್ಲಿದ್ದ ಮಹಿಳೆಯ ಸಾವಾಗಿದೆ.
ಕಾರು ಡಿವೈಡರ್ನಿಂದ ಹಾರಿ, ಪಕ್ಕದಲ್ಲಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ, ಸ್ಕೂಟಿಯ ಹಿಂಬದಿಯಲ್ಲಿ ಕುಳಿತಿದ್ದ ವಸಂತಿ(50) ಹೆಸರಿನ ಮಹಿಳೆ ಸುಮಾರು 20 ಅಡಿಯಷ್ಟು ಕೆಳಗಿನ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಆಕೆಗೆ ಗಂಭೀರ ಗಾಯವಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾಗಿ ತಿಳಿಸಲಾಗಿದೆ.
ಮೃತ ಮಹಿಳೆಯ ಪುತ್ರಿಗೂ ಗಂಭೀರ ಗಾಯವಾಗಿದೆ. ಈ ಭೀಕರ ಅಪಘಾತದ ದೃಶ್ಯ ಸಿ.ಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಈ ಅಪಘಾತ ಪ್ರಕರಣ ನಾಗುರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.