21 ಪ್ರಯಾಣಿಕರಿದ್ದ ಬಸ್​ ಪಲ್ಟಿ, ಬಸ್​ ಚಕ್ರದಡಿಗೆ ಸಿಲುಕಿಕೊಂಡ ಬೈಕ್​..

Accident
Published on

ಕೊಡಗು: 21 ಪ್ರಯಾಣಿಕರಿದ್ದ ಬಸ್​ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಸ್​ ರಸ್ತೆ ಪಕ್ಕಕ್ಕೆ ಮಗುಚಿ ಬಿದ್ದರೆ, ಬೈಕ್ ಬಸ್​ನ ಚಕ್ರದಡಿಗೆ ಸಿಲುಕಿಕೊಂಡಿದೆ. ಕೊಡಗು ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಕೆಲಕಾಲ ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು.

ಮಡಿಕೇರಿ ಸಮೀಪದ ಬೋಯಿಕೇರಿಯಲ್ಲಿ ಈ ಅಪಘಾತ ಸಂಭವಿಸಿದೆ. ಮಡಿಕೇರಿಯಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ ಮತ್ತು ಬೈಕ್ ನಡುವೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಬಸ್​ನಲ್ಲಿ 21 ಮಂದಿ ಪ್ರಯಾಣಿಕರಿದ್ದು, ಅದೃಷ್ಟವಶಾತ್ ಅಷ್ಟೂ ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೈಕ್​ ಬಸ್​​ನ ಚಕ್ರದಡಿಗೆ ಸಿಲುಕಿಕೊಂಡರೂ ಆತ ಕೂಡ ಸಣ್ಣಪುಟ್ಟ ಗಾಯಗಳಿಗೆ ಒಳಗಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮಡಿಕೇರಿ ಗ್ರಾಮಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net