2 ಬಸ್​ಗಳ ಮಧ್ಯೆ ಭೀಕರ ಅಪಘಾತ: ಒಬ್ಬ ಚಾಲಕನಿಗೆ ಗಂಭೀರ ಗಾಯ, 50ಕ್ಕೂ ಹೆಚ್ಚು ಪ್ರಯಾಣಿಕರು ಆಸ್ಪತ್ರೆಗೆ ದಾಖಲು..

Bus Accident
Published on

ಶಿವಮೊಗ್ಗ: ಕೆಎಸ್​ಆರ್​ಟಿಸಿ ಮತ್ತು ಖಾಸಗಿ ಬಸ್​ ಮಧ್ಯೆ ಅಪಘಾತ ಸಂಭವಿಸಿದ್ದು, ಇದರಲ್ಲಿ ಒಬ್ಬ ಚಾಲಕನಿಗೆ ಗಂಭೀರವಾದ ಗಾಯವಾಗಿದ್ದು, 50ಕ್ಕೂ ಹೆಚ್ಚು ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿವಮೊಗ್ಗ ತಾಲೂಕಿನ ತೋಟದಕೆರೆ ಬಳಿ ಈ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಚಾಲಕ ಶ್ರೀಧರ್ ಸ್ಥಿತಿ ಗಂಭೀರವಾಗಿದ್ದು, ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಾತ್ರವಲ್ಲದೆ ಇಬ್ಬರು ಪ್ರಯಾಣಿಕರಿಗೂ ತೀವ್ರ ಗಾಯಗಳಾಗಿವೆ. ಗಾಯಗೊಂಡಿರುವ ಇತರ 50ಕ್ಕೂ ಹೆಚ್ಚು ಪ್ರಯಾಣಿಕರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಖಾಸಗಿ ಬಸ್​ ಶಿವನೊಗ್ಗದಿಂದ ಶೃಂಗೇರಿಗೆ ಹಾಗೂ ಸರ್ಕಾರಿ ಬಸ್ ಶೃಂಗೇರಿಯಿಂದ ಶಿವಮೊಗ್ಗಕ್ಕೆ ಸಾಗುತ್ತಿತ್ತು. ಖಾಸಗಿ ಬಸ್​ನಲ್ಲಿ 35ಕ್ಕೂ ಹೆಚ್ಚು ಮತ್ತು ಕೆಎಸ್​ಆರ್​ಟಿಸಿ ಬಸ್​​ನಲ್ಲಿ 45ಕ್ಕೂ ಹೆಚ್ಚು ಪ್ರಯಾಣಿಕರಿದ್ದು. ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net