ಕಾರಿಗೆ ಲಾರಿ ಡಿಕ್ಕಿ; ಸಿದ್ದನಕೊಳ್ಳ ಮಠದ ಶಿವಕುಮಾರ ಸ್ವಾಮೀಜಿಗೆ ಗಂಭೀರ ಗಾಯ

Swamiji
Published on

ಬಾಗಲಕೋಟೆ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ವಾಮೀಜಿಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನ ಅಮೀನಗಢದ ಬಳಿ ನಡೆದಿದೆ.

ಅಪಘಾತದಲ್ಲಿ ಇಳಕಲ್ ತಾಲೂಕಿನ ಸುಕ್ಷೇತ್ರ ಸಿದ್ದನಕೊಳ್ಳ ಮಠದ ಶಿವಕುಮಾರ ಸ್ವಾಮೀಜಿಗೆ ಗಂಭೀರವಾಗಿ ಗಾಯಗೊಂಡಿದ್ದು, ಇವರನ್ಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಪಲ್ಟಿ ಹೊಡೆದಿದ್ದು, ಸ್ವಾಮೀಜಿ ತಲೆಗೆ ಗಂಭೀರ ಗಾಯವಾಗಿದೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ಧಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net