ಭೀಕರ ಅಪಘಾತದಲ್ಲಿ 6 ಜನರ ದುರ್ಮರಣ

ಗದಗ: ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಮುಂಡರಗಿ ರಸ್ತೆ ರಿಂಗ್ ರೋಡ್ ಬಳಿ ಘಟನೆ ನಡೆದಿದೆ. ನಿಯಂತ್ರಣ ತಪ್ಪಿದ ಕಾರು ಮೊದಲಿಗೆ ಡಿವೈಡರ್​ಗೆ ಡಿಕ್ಕಿ ಹೊಡೆದು ನಂತರ ಹಂಪಿಗೆ ತೆರಳುತ್ತಿದ್ದ ಮತ್ತೊಂದು ಕಾರಿಗೂ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಐ-20 ಕಾರಿನಲ್ಲಿದ್ದ ಗದಗ ಮೂಲದ ಮಂಜುನಾಥ ಹಳ್ಳೀಕೇರಿ, ವಿರುಪಾಕ್ಷಪ್ಪ ಅಬ್ಬೀಗೇರಿ, ವಿಜಯಕುಮಾರ ಬನವಾಸಿ, ವಿಶ್ವನಾಥ ಕೆರೂರ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮತ್ತೊಂದು ಕಾರಿನಲ್ಲಿದ್ದ ಮೃತರು ಹಂಪಿಗೆ ಪ್ರವಾಸಕ್ಕೆ ತೆರಳುತ್ತಿದ್ದರು.

ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)