

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66 ಉದ್ಯಾವರ ಬಳಿ ಸ್ಕೂಟರ್ ಡಿಕ್ಕಿಯಾಗಿ ಶಿವಮೊಗ್ಗದ ನಿವಾಸಿ ಗಂಗಾಧರಪ್ಪ ಎಂಬುವರ ಗಂಭೀರ ಗಾಯಗೊಂಡ ಘಟನೆ ಸೋಮವಾರ ನಡೆದಿದೆ. ಉದ್ಯಾವರದಲ್ಲಿ ವಿವಾಹ ಕಾರ್ಯಕ್ರಮಕ್ಕೆ ಬಂದಿದ್ದ ಅವರು ಅಂಗಡಿಗೆ ತೆರಳಿ ವಾಪಸಾಗುತ್ತಿದ್ದ ವೇಳೆ ಸ್ಕೂಟರ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ರಸ್ತೆ ಬಿದ್ದು ಗಂಭೀರ ಗಾಯಗೊಂಡ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.