ಬಸ್ - ರಿಕ್ಷಾ ಡಿಕ್ಕಿ ಓರ್ವ ಸಾವು

Published on

ಪುತ್ತೂರು: ಮುಕ್ರಂಪಾಡಿಯಲ್ಲಿ ಎ.27 ರ ನಸುಕಿನ ಜಾವ 2 ಗಂಟೆ ಸುಮಾರಿಗೆ ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಹಿಂದಿರುಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್‌ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ, ರಿಕ್ಷಾ ಚಾಲಕ ಮೃತಪಟ್ಟಿದ್ದಾನೆ.

ಆಟೋ ರಿಕ್ಷಾ ಚಾಲಕ ಜೈಸನ್ (30) ಮೃತಪಟ್ಟವರು. ಸುಳ್ಯ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಬಸ್ ಮತ್ತು ವಿರುದ್ಧ ಧಿಕ್ಕಿನಿಂದ ಚಲಿಸುತ್ತಿದ್ದ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದ ತೀರ್ವತೆಗೆ ರಿಕ್ಷಾ ನಜ್ಜುಗುಜ್ಜಾಗಿದ್ದು, ಚಾಲಕ ಜೈಸನ್ ರಿಕ್ಷಾದ ಒಳಗೆ ಸಿಲುಕಿ ಹಾಕಿಕೊಂಡಿದ್ದು ಪುತ್ತೂರು ಅಗ್ನಿಶಾಮಕ ದಳದವರು ಸ್ಥಳಕ್ಕೆ ಬಂದು ಜೈಸನ್‌ ಅವರನ್ನು ಹೊರತೆಗೆದಿದ್ದಾರೆ. ಆದರೆ ಜೈಸನ್ ಆಗಲೇ ಮೃತಪಟ್ಟಿದ್ದಲೆಂದು ಹೇಳಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net