ಅಪಘಾತದಲ್ಲಿ ಗಾಯಗೊಂಡಿದ್ದ ಯುವತಿ ಮೃತ್ಯು

PTR_25 MAY_2
Published on

ಪುತ್ತೂರು: ಮಾಣಿ-ಮೈಸೂರು ಹೆದ್ದಾರಿಯ ಕಬಕ ಕೂವೆತ್ತಿಲದಲ್ಲಿ ತಿಂಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆ ಸೇರಿದ್ದ ಯುವತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಮಿತ್ತೂರು ಸಮೀಪದ ಸೂರ್ಯ ನಿವಾಸಿ ಲಿಂಗಪ್ಪ ಗೌಡ ಪುತ್ರಿ ಮಂಜುಶ್ರೀ (೨೦) ಮೃತ ಯುವತಿ. ವಿವೇಕಾನಂದ ಕಾಲೇಜಿನ ಪದವಿ ವಿದ್ಯಾರ್ಥಿನಿಯಾಗಿದ್ದ ಈಕೆ ಕೂವೆತ್ತಿಲದಲ್ಲಿ ಆಲ್ಟೋ ಕಾರು ಹಾಗೂ ಆಕ್ಟಿವಾ ನಡುವಿನ ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೋಮಾದಲ್ಲಿದ್ದು, ಕೆಲವು ದಿನಗಳಿಂದ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲರಲಿಲ್ಲ ಎನ್ನಲಾಗಿದೆ. ಶನಿವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡುವ ತಯಾರಿಲ್ಲಿದ್ದು, ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net