20.1 C
Bangalore
Friday, December 6, 2019

ಪ್ರತ್ಯೇಕ ಐದು ಅಪಘಾತ ಪ್ರಕರಣಗಳಲ್ಲಿ 8 ಜನ ಸಾವು

Latest News

ಎಲ್ಲ ಮಠಾಧೀಶರು ಅಭಿಯಾನ ಆರಂಭಿಸಲಿ

ಚಿತ್ರದುರ್ಗ: ಸೋಂದಾ ಸ್ವರ್ಣವಲ್ಲೀ ಸಂಸ್ಥಾನದ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನದಿಂದ ಆಯೋಜಿಸಿರುವ ಭಗವದ್ಗೀತಾ ಅಭಿಯಾನದ ನಿಮಿತ್ತ ಶುಕ್ರವಾರ ಚಿತ್ರದುರ್ಗದಲ್ಲಿ ರಾಜ್ಯಮಟ್ಟದ ಭಾಷಣ, ಭಗವದ್ಗೀತೆ ಕಂಠಪಾಠ...

ಕೋಟೆ ನಾಡಲ್ಲಿಂದು ಭಗವದ್ಗೀತಾ ಅಭಿಯಾನದ ಮಹಾಸಮರ್ಪಣೆ

ಚಿತ್ರದುರ್ಗ: ವ್ಯಕ್ತಿತ್ವ ವಿಕಸನ, ಸಾಮಾಜಿಕ ಸಾಮರಸ್ಯ, ದೇಶದ ಏಕತೆ ಸಲುವಾಗಿ ಶಿರಸಿ ಸೋಂದಾ ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನೇತೃತ್ವದಲ್ಲಿ ನಡೆದಿರುವ...

14ರಂದು ಲೋಕ್ ಅದಾಲತ್

ಚಿತ್ರದುರ್ಗ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಆಶ್ರಯದಲ್ಲಿ ನ.14ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಲೋಕ್ ಆದಾಲತ್ ನಡೆಯಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು...

ಆಯುಷ್ ಉಚಿತ ಚಿಕಿತ್ಸಾ ಶಿಬಿರ

ಪರಶುರಾಮಪುರ: ಹೋಬಳಿಯ ಪಿ.ಮಹದೇವಪುರ ಗ್ರಾಮದ ಸರ್ಕಾರಿ ಆಯುರ್ವೇದ ಆಸ್ಪತ್ರೆಯ ಆವರಣದಲ್ಲಿ ಇತ್ತೀಚಿಗೆ ಆಯುಷ್ ಉಚಿತ ಚಿಕಿತ್ಸಾ ಶಿಬಿರ ನಡೆಯಿತು. ಗ್ರಾಪಂ ವ್ಯಾಪ್ತಿಯ ಪಿ.ಓಬನಹಳ್ಳಿ, ಕಡೇಹುಡೆ,...

ಡ್ರೋನ್ ಕಣ್ಣಿಗೂ ಬೀಳದ ಒಂಟಿ ಸಲಗ

ಚಿತ್ರದುರ್ಗ: ಕೆನ್ನೆಡಲು ಅರಣ್ಯದಲ್ಲಿ ಸಲಗದ ಹೆಜ್ಜೆ ಗುರುತು ಹಿನ್ನೆಲೆಯಲ್ಲಿ ಅರಣ್ಯ ಸಿಬ್ಬಂದಿ ಶುಕ್ರವಾರ ಡ್ರೋನ್ ಬಳಸಿದರೂ ಆನೆ ಪ್ರಯೋಜನವಾಗಿಲ್ಲ. ಹಿಂಡಿಂದ ಅಗಲಿದೇ ಎಂದು ಹೇಳಲಾಗಿರುವ...

ಉತ್ತರಕನ್ನಡ: ರಾಜ್ಯದ ಹಲವೆಡೆ ಸಂಭವಿಸಿದ ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ 8 ಜನ ಮೃತಪಟ್ಟಿರುವ ಧಾರುಣ ಘಟನೆ ಬುಧವಾರ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಮಾದನಗೇರಿ ಬಳಿ ಲಾರಿ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಬ್ಬನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರನ್ನು ಬೆಳಗಾವಿಯ ನೆಹರುನಗರ ನಿವಾಸಿಗಳಾದ ಸುರೇಶ್ ಲಕ್ಷಣ್ ರಾಯ್ಕರ್(65), ಚಂದ್ರಕಲಾ ರಾಯ್ಕರ್(60) ಎಂದು ಗುರುತಿಸಲಾಗಿದೆ. ಗೋವಾದ ಮಾಪ್ಸಾ ನಿವಾಸಿ ಭಾರತಿಗೆ ಗಂಭೀರ ಗಾಯವಾಗಿದೆ.
ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಟ್ರ್ಯಾಕ್ಟರ್‌ ಪಲ್ಟಿಯಾಗಿ ಇಬ್ಬರು ಸಾವು

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ‌ ಪಿಕೆ ನಾಗನೂರು ಗ್ರಾಮದ ಹೊರವಲಯದಲ್ಲಿ ಟ್ರ್ಯಾಕ್ಟರ್​​​ ಪಲ್ಟಿಯಾಗಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದಾಗ ಅವಘಡ ಸಂಭವಿಸಿದ್ದು, ಮಹಾನಂದಾ ಮೇಂಡಿಗೇರಿ(48), ದಾಕ್ಷಾಯಣಿ ಮಲ್ಲಪ್ಪ ಗಲಗಲಿ(39) ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರು ಕೂಲಿ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳು ಅಥಣಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಕ್‌ ಮುಖಾಮುಖಿ ಡಿಕ್ಕಿ ಇಬ್ಬರು ಸಾವು

2 ಬೈಕ್​​ಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಬಳ್ಳಾರಿ ತಾಲೂಕಿನ ಶ್ರೀಧರಗಡ್ಡಿ ಬಳಿ ನಡೆದಿದೆ. ಜಿಪಂ ಸದಸ್ಯ ಗೋಪಾಲ ಎಂಬುವವರ ಪುತ್ರ ಹನುಮೇಶ್, ರಾಮರೆಡ್ಡಿ ಮೃತರು. ಬಳ್ಳಾರಿ ಗ್ರಾಮಾಂತರ ‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು

ಚಾಲಕನ ನಿಯಂತ್ರಣ ತಪ್ಪಿ‌ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕುಪ್ಪಾಳು ಬಳಿ ಚನ್ನಗಿರಿ ತಾಲೂಕಿನ ಬೆಳಗೆರೆ ಗ್ರಾಮದ ವಿಜಯ್ ಕುಮಾರ್(28) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದಾವಣಗೆರೆ ಮೂಲದ ಮಂಜುನಾಥ್‌ಗೆ ಗಾಯಗಳಾಗಿದ್ದು, ಕಡೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು ಡಿಕ್ಕಿ: ಪಾದಚಾರಿ ಸಾವು

ರಸ್ತೆ ದಾಟುವಾಗ ಕಾರು ಡಿಕ್ಕಿಯಾಗಿ ಸ್ಥಳದಲ್ಲೆ ಪಾದಚಾರಿಯೊಬ್ಬ ಮೃತಪಟ್ಟಿದ್ದಾರೆ. ಗುಂಡ್ಲುಪೇಟೆ ತಾಲೋಕಿನ ಚಿಕ್ಕ ತುಪ್ಪೂರು ಗೇಟ್ ಬಳಿ ಘಟನೆ ನಡೆದಿದ್ದು, ಕಿಲಗೆರೆ ಗ್ರಾಮದ ಮಹದೇವಸ್ವಾಮಿ(65) ಮೃತರು. ಬಸ್ಸಿನಿಂದ ಇಳಿದು ರಸ್ತೆ ದಾಟುವಾಗ ಕೇರಳ ಮೂಲದ ಕಾರು ಡಿಕ್ಕಿ ಹೊಡೆದಿದೆ. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)

Stay connected

278,738FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...