ಟಂಟಂ ಪಲ್ಟಿ: ಸ್ಥಳದಲ್ಲೇ ಇಬ್ಬರು ಸಾವು

ವಿಜಯಪುರ: ಬಸವನಬಾಗೇವಾಡಿ ಬಳಿ ಟಂಟಂ ಪಲ್ಟಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತಮದಡ್ಡಿ ನಿವಾಸಿ ಸಾಹೇಬಗೌಡ ಕುಂಟರೆಡ್ಡಿ(65), ಕೋಡೆಪ್ಪ ಮಡಿವಾಳಕರ(60) ಮೃತ ದುರ್ದೈವಿಗಳು. ಅಪಘಾತದಲ್ಲಿ ಇನ್ನೂ ಮೂವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬಸವನಬಾಗೇವಾಡಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *