Shooting: ಕಾಂತಾರ ಚಾಪ್ಟರ್-1 ಸಿನಿಮಾ ಶೂಟಿಂಗ್ ಆರಂಭದಿಂದಲೂ ಒಂದಲ್ಲ ಒಂದು ಸುದ್ದಿಯಲ್ಲಿದೆ. ಇದೀಗ ಶೂಟಿಂಗ್ ವೇಳೆ ಮತ್ತೊಂದು ಅವಘಡ ಶನಿವಾರ ಸಂಭವಿಸಿದೆ.
ರಿಷಬ್ ಶೆಟ್ಟಿ ನಟನೆ ಮತ್ತು ನಿರ್ದೇಶನ ಮಾಡುತ್ತಿರುವ ಕಾಂತಾರ-1 ಚಿತ್ರದ ಶೂಟಿಂಗ್ ವೇಳೆ ಜಲಾಶಯದಲ್ಲಿ ದೋಣಿ ಮಗುಚಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಬೋಟ್ನಲ್ಲಿ ರಿಷಬ್ ಶೆಟ್ಟಿ ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ಮಂದಿ ಕಲಾವಿದರು, ಹಾಗೂ ತಂತ್ರಜ್ಞರು ಇದ್ದರೆಂದು ವರದಿ ಆಗಿದೆ. ಚಿತ್ರೀಕರಣ ಚಾಲ್ತಿಯಲ್ಲಿರುವಾಗಲೇ ಬೋಟು ಮುಗಿಚಿದೆ ಆದರೆ ಯಾವುದೇ ಜೀವ ಹಾನಿ ಆಗಿಲ್ಲ. ಕಲಾವಿದರು, ತಂತ್ರಜ್ಞರೆಲ್ಲರೂ ಈಜಿಕೊಂಡು ದಡಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ.
ಚಿತ್ರದ ಕೊನೆಯ ಹಂತದ ಶೂಟಿಂಗ್ ಗಾಗಿ ತೀರ್ಥಹಳ್ಳಿಯ ಮಾಣಿ ಜಲಾಶಯದ ಬಳಿ 15 ದಿನಗಳ ಕಾಲ ಶೂಟಿಂಗ್ ನಡೆಸಲಾಗುತ್ತಿತ್ತು.ಶೂಟಿಂಗ್ ನಡೆಸುತ್ತಿದ್ದ ವೇಳೆ ದೋಣಿ ಮಗುಚಿದೆ ಎಂದು ಹೇಳಲಾಗಿದೆ.