ಕಾರಿಗೆ ಡಿಕ್ಕಿ ಹೊಡೆದು ರಸ್ತೆಗೆ ಅಡ್ಡವಾಗಿ ಪಲ್ಟಿಯಾದ ಲಾರಿ; ಹೆದ್ದಾರಿ ತುಂಬಾ ದೊಡ್ಡ ದೊಡ್ಡ ಶಿಲೆಗಲ್ಲುಗಳು, ಸಂಚಾರ ಅಸ್ತವ್ಯಸ್ತ..

Accident 1
Published on

ಕೊಡಗು: ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್​ ಲಾರಿಯೊಂದು ಪಲ್ಟಿಯಾಗಿ ರಸ್ತೆಗೆ ಅಡ್ಡವಾಗಿ ಬಿದ್ದಿದ್ದಲ್ಲದೆ, ಅದರಲ್ಲಿ ತುಂಬಿದ್ದ ದೊಡ್ಡ ಶಿಲೆಗಲ್ಲುಗಳು ರಸ್ತೆ ತುಂಬಾ ಚೆಲ್ಲಾಪಿಲ್ಲಿಯಾಗಿ, ಸಂಚಾರ ಅಸ್ತವ್ಯಸ್ತವೂ ಆಗುವಂತಾಗಿದೆ.

ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಮಡಿಕೇರಿ ಸಮೀಪದ ಕೆದಕಲ್ ಎಂಬ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಕಲ್ಲು ತುಂಬಿದ್ದ ಟಿಪ್ಪರ್ ಲಾರಿ ಹಾಗೂ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಡಿಕ್ಕಿಯಾದ ರಭಸಕ್ಕೆ ಕಾರು ರಸ್ತೆಯ ಪಕ್ಕಕ್ಕೆ ತಳ್ಳಲ್ಪಟ್ಟಿದ್ದರೆ, ಲಾರಿ ಪಲ್ಟಿಯಾರಿ ರಸ್ತೆಗೆ ಅಡ್ಡವಾಗಿ ಬಿದ್ದಿದೆ.

ಪರಿಣಾಮವಾಗಿ ಲಾರಿಯಲ್ಲಿದ್ದ ದೊಡ್ಡ ದೊಡ್ಡ ಶಿಲೆಗಲ್ಲುಗಳು ರಸ್ತೆ ತುಂಬಾ ಚೆಲ್ಲಾಪಿಲ್ಲಿಯಾಗಿವೆ. ಟಿಪ್ಪರ್​ ಕುಶಾಲನಗರದಿಂದ ಮಡಿಕೇರಿ ಕಡೆಗೆ ಸಾಗುತ್ತಿತ್ತು. ಈ ಅಪಘಾತದಿಂದ ಮೈಸೂರು-ಕೊಡಗು ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯವಾಗಿದೆ. ಸುಂಟಿಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net