ಟಿಪ್ಪರ್​-ಕಾರು ಡಿಕ್ಕಿ: ಇಬ್ಬರು ಸಾವು

ಹಾಸನ: ಕಾರಿಗೆ ಟಿಪ್ಪರ್ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸಕಲೇಶಪುರದ ಆನೆಮಹಲ್ ಬಳಿ ಘಟನೆ ಸಂಭವಿಸಿದ್ದು, ರಾಹುಲ್, ಸಂಜಯ್ ಎಂಬ ಯುವಕರು ಮೃತಪಟ್ಟಿದ್ದಾರೆ.

ಬೆಂಗಳೂರು ಮೂಲದ ಮೂವರು ಧರ್ಮಸ್ಥಳದಿಂದ ಬೆಂಗಳೂರಿಗೆ ಹಿಂದಿರುಗುವಾಗ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಮತ್ತೊಬ್ಬ ಯುವಕ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಸಂಭವಿಸುತ್ತದ್ದಂತೆ ಸ್ಥಳಕ್ಕೆ ತೆರಳಿದ ಸಕಲೇಶಪುರ ನಗರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. (ದಿಗ್ವಿಜಯ ನ್ಯೂಸ್)