ಭೀಕರ ಸರಣಿ ಅಪಘಾತ: ಸ್ಥಳದಲ್ಲೇ ಮೂವರ ಸಾವು, ಇಬ್ಬರ ಸ್ಥಿತಿ ಗಂಭೀರ

ctd accident
Published on

ಚಿತ್ರದುರ್ಗ: ಹಿರಿಯೂರು ತಾಲೂಕಿನ ಕೆ.ಆರ್.ಹಳ್ಳಿ ಗೇಟ್ ಬಳಿ ಸೋಮವಾರ ಸರಣಿ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಹೊಸದುರ್ಗ ನಿವಾಸಿ ನೇಮಿರಾಜ್(58), ನಂದಾ(53) ಮತ್ತು ರಂಗ (35) ಎಂದು ಗುರುತಿಸಲಾಗಿದೆ. ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಹಿರಿಯೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿರಿ ವಿಡಿಯೋ ಕಾಲ್​ ರಿಸೀವ್​ ಮಾಡಿ ಹನಿಟ್ರ್ಯಾಪ್​ಗೆ ಬಿದ್ದ ಮಾಜಿ ಶಾಸಕನ ಪುತ್ರನಿಗೆ ಸಂಕಷ್ಟ!

ಅಪಘಾತದಲ್ಲಿ ಟಾಟಾ ಸಫಾರಿ, ಕ್ಯಾಂಟರ್​, ಇಟಿಯೋಸ್​ ಕಾರುಗಳು ಜಖಂ ಗೊಂಡಿವೆ. ಮೃತದೇಹಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ದೃಶ್ಯ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.

ಬೆಂಗಳೂರಿನಿಂದ ಹೊಸದುರ್ಗಕ್ಕೆ ತೆರಳುತ್ತಿದ್ದ ಟಾಟಾ ಸಫಾರಿ ರಸ್ತೆ ಡಿವೈಡರ್ ದಾಟಿ ಕ್ಯಾಂಟರ್​ಗೆ ಡಿಕ್ಕಿ ಹೊಡೆದಿದೆ. ಬಳಿಕ ಚಿತ್ರದುರ್ಗ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಇಟಿಯೋಸ್ ಕಾರಿಗೆ ಡಿಕ್ಕಿಯಾಗಿದೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net