ಡಿವೈಡರ್​ಗೆ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಸಾವು

Accident
Published on

ಹೊಳೆನರಸೀಪುರ: ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು ಹಿಂಬದಿ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಹೊಳೆನರಸೀಪುರ ಪಟ್ಟಣದಲ್ಲಿ ತಡರಾತ್ರಿ ನಡೆದಿದೆ.

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಸೂರನಹಳ್ಳಿ ಗ್ರಾಮದ ದಯಾನಂದ‌ (28) ಮೃತ ದುರ್ದೈವಿ. ಈತನ ಸ್ನೇಹಿತ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಬಗ್ಗೆ ಹೊಳೆನರಸೀಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net