

ಸುಳ್ಯ: ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳ ಗಡಿ ಭಾಗವಾದ ಸಂಪಾಜೆಯ ಬಳಿ ಶನಿವಾರ ತಡರಾತ್ರಿ ಭೀಕರ ಕಾರು ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ನುಜ್ಜುಗುಜ್ಜಾಗಿದ್ದು, ಕಾರಲ್ಲಿದ್ದವರೊಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಮಂಡ್ಯ ಮೂಲದ ನಾಲ್ವರು ಫೋಟೋಗ್ರಾಫರ್ಸ್ ಹೊನ್ನಾವರಕ್ಕೆ ಹೋಗಿ ತಮ್ಮ ಕೆಲಸ ಮುಗಿಸಿ ವಾಪಸ್ ಮಂಡ್ಯಕ್ಕೆ ಹೊರಟಿದ್ದರು. ರಾತ್ರಿ ಮೂರು ಗಂಟೆಯ ವೇಳೆಗೆ ಸಂಪಾಜೆ ಗೇಟಿನಿಂದ ಸ್ವಲ್ಪ ದೂರದಲ್ಲಿ ನಿಯಂತ್ರಣ ತಪ್ಪಿದ ಕಾರು ರಸ್ತೆಯ ರಕ್ಷಣಾ ಗೋಡೆಗೆ ಡಿಕ್ಕಿಯಾಗಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಕಾರು ಛಿದ್ರವಾಗಿದೆ. ರಸ್ತೆಯ ಬದಿಯ ಕಬ್ಬಿಣದ ತಡೆಗೋಡೆ ಕಾರಿನೊಳಕ್ಕೆ ನುಗ್ಗಿದೆ. ಘಟನೆಯಲ್ಲಿ ಈರ್ವರು ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಉಳಿದಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.